ಹೊಸನಗರ: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಅಡಿಕೆ ಸಂಸ್ಥೆಗಳಲ್ಲಿ ಒಂದಾದ ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿಯಮಿತ (ಮಾಮ್ಕೋಸ್), ಶಿವಮೊಗ್ಗ ವತಿಯಿಂದ ವಿವಿಧ ಶಾಖೆಗಳ ಸದಸ್ಯರ ಸಮಾಲೋಚನಾ ಸಭೆಗಳನ್ನು ಆಯೋಜಿಸಲಾಗುತ್ತಿದ್ದು, ಅದರ ಅಂಗವಾಗಿ ಜುಲೈ 22ರಂದು (ಬುಧವಾರ) ಮಧ್ಯಾಹ್ನ 3.30ಕ್ಕೆ ಹೊಸನಗರದಲ್ಲಿ ಸರ್ವ ಸದಸ್ಯರ ಸಮಾಲೋಚನಾ ಸಭೆ ನಡೆಯಲಿದೆ.
ಹೊಸನಗರ ಬಸ್ ನಿಲ್ದಾಣದ ಹಿಂಭಾಗದ ಚೌಡಮ್ಮ ರಸ್ತೆಯಲ್ಲಿರುವ ಸಂಘದ ಸ್ವಂತ ಕಟ್ಟಡದ ಆವರಣದಲ್ಲಿ ಸಭೆ ನಡೆಯಲಿದ್ದು, ಎಲ್ಲಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ನಿರ್ದೇಶಕ ಬರುವೆ ಶ್ರೀಕಾಂತ್ ಮನವಿ ಮಾಡಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಮಾಮ್ಕೋಸ್ ಉಪಾಧ್ಯಕ್ಷ ಎಚ್.ಎಸ್. ಮಹೇಶ್ ಹುಲ್ಕುಳಿ ವಹಿಸಲಿದ್ದಾರೆ. ಸಂಘದ ನಿರ್ದೇಶಕರಾದ ಕೆ.ವಿ. ಕೃಷ್ಣಮೂರ್ತಿ, ಧರ್ಮೇಂದ್ರ ಹೆಚ್ ಸೇರಿದಂತೆ ಸಂಘದ ಎಲ್ಲಾ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
















Leave a Reply