ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Add a heading 20260723 213201 0000 ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ
Spread the love

ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

2024ರಲ್ಲಿ ಶಿಕಾರಿಪುರ ತಾಲೂಕಿನ 23 ವರ್ಷದ ವ್ಯಕ್ತಿಯೊಬ್ಬರು 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಅಂದಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ಪುಷ್ಪಾ ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಸಾಕ್ಷ್ಯಾಧಾರಗಳನ್ನು ಹಾಗೂ ವಾದ-ಪ್ರತಿವಾದಗಳನ್ನು ಆಲಿಸಿ ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *