ಹೊಸನಗರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ನಡುವೆಯೂ ಪಟ್ಲ ಫೌಂಡೇಶನ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಉಚಿತ ಯಕ್ಷಗಾನ ತರಬೇತಿ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಹೊಸನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್ ಹೇಳಿದರು.
ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಉಚಿತ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಯಕ್ಷಗಾನವು ನೂರಾರು ವರ್ಷಗಳ ಇತಿಹಾಸ ಹೊಂದಿರುವ ನಮ್ಮ ಹೆಮ್ಮೆಯ ಕಲೆಯಾಗಿದ್ದು, ಕಲೆ ಸಂಸ್ಕೃತಿ ಉಳಿಸುವಲ್ಲಿ ಸಮಾಜದ ಸಹಕಾರ ಅಗತ್ಯ ಎಂದು ತಿಳಿಸಿದರು.
ನಗರ ರಾಘವೇಂದ್ರ ಮಾತನಾಡಿ, ಪಟ್ಟ್ಲ ಫೌಂಡೇಶನ್ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಕಾರ್ಯ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಸುಧೀಂದ್ರ ಪಂಡಿತ್ ಮಾತನಾಡಿ, ಯಕ್ಷಗಾನವು ನಮ್ಮ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಮುಂದಿನ ಪೀಳಿಗೆ ಈ ಕಲೆಯನ್ನು ಕಲಿತು ಉಳಿಸಿ ಬೆಳೆಸಿದರೆ ಮಾತ್ರ ಅದು ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ, ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ರಾಜೇಶ್, ಗೌತಮ್ ಕುಮಾರಸ್ವಾಮಿ, ಎಂ.ಕೆ. ವೆಂಕಟೇಶ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
















Leave a Reply