ರಿಪ್ಪನ್ಪೇಟೆ: ಸಮೀಪದ ಬೆನವಳ್ಳಿ ಗ್ರಾಮದ ದೂನದ 57 ವರ್ಷದ ವ್ಯಕ್ತಿಯೊಬ್ಬರು ಶನಿವಾರ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತರನ್ನು ಮಂಜುನಾಥ್ (57) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ, ಈ ಕುರಿತು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
















Leave a Reply