ತೀರ್ಥಹಳ್ಳಿ ಗುಡ್ಡ ಕುಸಿತ ದುರಂತ: 8ಗಂಟೆಗಳ ಕಾರ್ಯಾಚರಣೆ ಬಳಿಕ ಮೂವರ ಶವ ಪತ್ತೆ

Add a heading 20260802 212305 0000 ತೀರ್ಥಹಳ್ಳಿ ಗುಡ್ಡ ಕುಸಿತ ದುರಂತ: 8ಗಂಟೆಗಳ ಕಾರ್ಯಾಚರಣೆ ಬಳಿಕ ಮೂವರ ಶವ ಪತ್ತೆ
Spread the love

ತೀರ್ಥಹಳ್ಳಿ: ಪಟ್ಟಣದ ಗಾಂಧಿನಗರದಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ಮೂವರ ಮೃತದೇಹಗಳನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸುಮಾರು ಎಂಟು ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಪತ್ತೆಹಚ್ಚಿದ್ದಾರೆ.
ಭಾನುವಾರ ಬೆಳಗ್ಗೆ ಸುಮಾರು 5.30 ಗಂಟೆಗೆ ಆರಂಭವಾದ ರಕ್ಷಣಾ ಕಾರ್ಯಾಚರಣೆ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಿತು , ಧಾರಾಕಾರ ಮಳೆಯ ನಡುವೆಯೂ ಸಿಬ್ಬಂದಿ ಶ್ರಮಪಟ್ಟು ಕಾರ್ಯಾಚರಣೆ ನಡೆಸಿದರು.

img 20260802 wa00131953537469664193440 ತೀರ್ಥಹಳ್ಳಿ ಗುಡ್ಡ ಕುಸಿತ ದುರಂತ: 8ಗಂಟೆಗಳ ಕಾರ್ಯಾಚರಣೆ ಬಳಿಕ ಮೂವರ ಶವ ಪತ್ತೆ

ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನಿವಾಸಿಗಳೆಂದು ಗುರುತಿಸಲಾಗಿದೆ.

   ತೀರ್ಥಹಳ್ಳಿ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದು, ನಿರಂತರ ಮಳೆಯಿಂದ ಕೆಲಕಾಲ ಅಡಚಣೆ ಉಂಟಾದರೂ ಕಾರ್ಯಾಚರಣೆಯನ್ನು ನಿಲ್ಲಿಸದೆ ಮುಂದುವರಿಸಿ ಕೊನೆಗೂ ಮೂವರ ಮೃತದೇಹಗಳನ್ನು ಹೊರತೆಗೆದರು.

ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೀರ್ಥಹಳ್ಳಿ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!