ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ (ಆಗಸ್ಟ್ 3) ಸಾಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನಿರಂತರ ಮಳೆ ಹಾಗೂ ಸಂಭವನೀಯ ಅನಾಹುತಗಳ ಸಾಧ್ಯತೆಯನ್ನು ಪರಿಗಣಿಸಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಾಗರ ತಹಶೀಲ್ದಾರ್ ಆರ್. ಪ್ರತಿಭಾ ಹಾಗೂ ತೀರ್ಥಹಳ್ಳಿ ತಹಶೀಲ್ದಾರ್ ರಂಜಿತ್ ಅವರು ಪ್ರತ್ಯೇಕ ಆದೇಶ ಹೊರಡಿಸಿ, ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿದ್ದಾರೆ.
ಜಿಲ್ಲಾಡಳಿತವು ಸಾರ್ವಜನಿಕರು ಹಾಗೂ ಪೋಷಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದು, ಅನಗತ್ಯವಾಗಿ ನದಿ, ಹಳ್ಳ-ಕೊಳ್ಳ, ಜಲಪಾತ ಹಾಗೂ ಗುಡ್ಡ ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಿದೆ .















Leave a Reply