ಬೆಂಗಳೂರು: ಮಂತ್ರಿ ಸ್ಥಾನ ದೊರೆಯದಿದ್ದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲವಾಗಿ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಮುಂದುವರಿಯುತ್ತೇನೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದರು.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಂತ್ರಿ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ನನಗೆ ಸಹಜವಾಗಿಯೇ ನೋವಾಗಿದೆ. ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರು ಕೂಡ ತೀವ್ರ ನಿರಾಸೆಯಿಂದ ಅಳುತ್ತಾ ಊರಿಗೆ ಮರಳಿದ್ದಾರೆ. ಅವರ ನೋವು ನನಗೂ ಕಾಡುತ್ತಿದೆ,” ಎಂದು ಭಾವುಕರಾದರು.

ಮಂತ್ರಿ ಸ್ಥಾನ ಕೈತಪ್ಪಿದ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವನ್ನೂ ಯೋಚಿಸಿದ್ದೆ. ಈ ವಿಷಯ ತಿಳಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾತ್ರಿ ದೂರವಾಣಿ ಮೂಲಕ ಸಂಪರ್ಕಿಸಿ ಯಾವುದೇ ಆತುರದ ನಿರ್ಧಾರ ಕೈಗೊಳ್ಳಬೇಡಿ ಎಂದು ಸಲಹೆ ನೀಡಿದರು. ಬಳಿಕ ಬೆಳಿಗ್ಗೆ ತಮ್ಮನ್ನು ಕರೆಸಿ ಸಮಾಲೋಚನೆ ನಡೆಸಿದರು ಎಂದು ಅವರು ತಿಳಿಸಿದರು.
“ಮುಂದಿನ ಚುನಾವಣೆಯಲ್ಲಿ ಯಾವುದೇ ಗೊಂದಲ ಉಂಟಾಗಬಾರದು ಎಂಬ ಕಾರಣಕ್ಕೆ, ಮಂತ್ರಿ ಸ್ಥಾನ ಸಿಗದಿದ್ದರೂ ಪಕ್ಷದ ಪರವಾಗಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಕೆಲಸ ಮುಂದುವರಿಸುತ್ತೇನೆ,” ಎಂದು ಹೇಳಿದರು.
“ನನಗೆ ಮೊದಲ ಬಾರಿಗೆ ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಟಿಕೆಟ್ ದೊರೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಪ್ರಮುಖ ಕಾರಣ. ಆ ಋಣವನ್ನು ನಾನು ಎಂದಿಗೂ ಮರೆಯುವುದಿಲ್ಲ. ಹೀಗಾಗಿ ಮಂತ್ರಿ ಸ್ಥಾನ ಸಿಗದಿದ್ದರೂ ಅವರ ಜೊತೆ ನಿಷ್ಠೆಯಿಂದ ನಿಲ್ಲುತ್ತೇನೆ,” ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.ತಾವು ಸಾಮಾನ್ಯ ಹಿಂದುಳಿದ ವರ್ಗದಿಂದ ಬಂದವರಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ತಮ್ಮ ಪರವಾಗಿ ಮಾತನಾಡುವ ಅವಕಾಶ ಇರಲಿಲ್ಲ. ಕಳೆದ ಮೂರು ವರ್ಷಗಳಲ್ಲಿ ಯಾವುದೇ ವಿವಾದ ಅಥವಾ ಭಿನ್ನಮತ ಸೃಷ್ಟಿಸದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಅದೇ ನಿಷ್ಠೆಯಿಂದ ಪಕ್ಷದೊಂದಿಗೆ ಕಾರ್ಯನಿರ್ವಹಿಸುತ್ತೇನೆ ಎಂದು ಅವರು ಹೇಳಿದರು.
ತಾವು ಸಾಮಾನ್ಯ ಹಿಂದುಳಿದ ವರ್ಗದಿಂದ ಬಂದವರಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ತಮ್ಮ ಪರವಾಗಿ ಮಾತನಾಡುವ ಅವಕಾಶ ಇರಲಿಲ್ಲ. ಕಳೆದ ಮೂರು ವರ್ಷಗಳಲ್ಲಿ ಯಾವುದೇ ವಿವಾದ ಅಥವಾ ಭಿನ್ನಮತ ಸೃಷ್ಟಿಸದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಅದೇ ನಿಷ್ಠೆಯಿಂದ ಪಕ್ಷದೊಂದಿಗೆ ಕಾರ್ಯನಿರ್ವಹಿಸುತ್ತೇನೆ ಎಂದು ಅವರು ಹೇಳಿದರು.

















Leave a Reply