ಹೊಸನಗರ: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಸೌಲಭ್ಯಗಳು ಹಾಗೂ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ಸರ್ಕಾರಿ ಅಧಿಕಾರಿಗಳಿಗೆ ವಿಡಿಯೋ ಸಂವಾದದ ಮೂಲಕ ಮಾರ್ಗದರ್ಶನ ನೀಡಿದರು.
ಸಾರ್ವಜನಿಕರು ತಮ್ಮ ಕಚೇರಿಗಳಿಗೆ ಆಗಮಿಸಿದ ಸಂದರ್ಭದಲ್ಲಿ ಅಧಿಕಾರಿಗಳು ಯಾವ ರೀತಿಯಲ್ಲಿ ಸ್ಪಂದಿಸಬೇಕು, ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಹೇಗೆ ಕಾರ್ಯನಿರ್ವಹಿಸಬೇಕು ಸೇರಿದಂತೆ ಹಲವು ಆಡಳಿತಾತ್ಮಕ ವಿಚಾರಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಈ ಹಿನ್ನೆಲೆಯಲ್ಲಿ ಹೊಸನಗರದ ಸಭಾಭವನದ ಆವರಣದಲ್ಲಿ ಮುಖ್ಯಮಂತ್ರಿಗಳ ವಿಡಿಯೋ ಸಂವಾದ ಕಾರ್ಯಕ್ರಮವನ್ನು ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳು ವೀಕ್ಷಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಭರತ್ರಾಜ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎನ್. ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಹೊಸನಗರ ತಾಲೂಕಿನಲ್ಲಿ ವಿವಿಧ ಇಲಾಖೆಗಳ ಸುಮಾರು 250 ಸರ್ಕಾರಿ ಅಧಿಕಾರಿಗಳು ಮುಖ್ಯಮಂತ್ರಿಗಳ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾರ್ಗದರ್ಶನವನ್ನು ವೀಕ್ಷಿಸಿದರು.

















Leave a Reply