ನಾಗರಹಳ್ಳಿಯಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ ಜಾತ್ರೆ; ಶ್ರೀ ನಾಗೇಂದ್ರ ಸ್ವಾಮಿಗೆ ವಿಶೇಷ ಪೂಜೆ

Addaheading 20260817 194336 0000 ನಾಗರಹಳ್ಳಿಯಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ ಜಾತ್ರೆ; ಶ್ರೀ ನಾಗೇಂದ್ರ ಸ್ವಾಮಿಗೆ ವಿಶೇಷ ಪೂಜೆ
Spread the love

ರಿಪ್ಪನ್‌ಪೇಟೆ: ತಿಹಾಸ ಪ್ರಸಿದ್ಧ ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರಾ ಮಹೋತ್ಸವವು ಸೋಮವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.
  ವರ್ಷದಲ್ಲಿ ಎರಡು ಬಾರಿ ಬರುವ ನಾಗರ ಪಂಚಮಿಯಂದು ನಾಗರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ ನಡೆಯುವುದು ಇಲ್ಲಿನ ವಿಶೇಷತೆಯಾಗಿದೆ. ನಾಗರ ಪಂಚಮಿ ಅಂಗವಾಗಿ ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ನಾಗೇಂದ್ರ ಸ್ವಾಮಿಗೆ ಎಳನೀರು, ಕ್ಷೀರ ಹಾಗೂ ಪಂಚಾಮೃತ ಅಭಿಷೇಕ, ಪವಮಾನ ಪೂಜೆ, ವಿಶೇಷ ಹೂವಿನ ಅಲಂಕಾರ ಮತ್ತು ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.
  ಜಾತ್ರಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಸರತಿ ಸಾಲಿನಲ್ಲಿ ನಿಂತು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಹರಕೆ ಹಾಗೂ ಕಾಣಿಕೆಗಳನ್ನು ಸಮರ್ಪಿಸಿ, ಹಣ್ಣು-ಕಾಯಿ ಅರ್ಪಿಸಿ ತೀರ್ಥಪ್ರಸಾದ ಸ್ವೀಕರಿಸಿದರು.
  ಈ ಸಂದರ್ಭದಲ್ಲಿ ನಾಗರಹಳ್ಳಿ ನಾಗೇಂದ್ರ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೇರುಗಲ್ಲು ಸತೀಶ್ ಸೇರಿದಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

file 000000003f5c8208a0b120fec3430d9d3186930461350658435 ನಾಗರಹಳ್ಳಿಯಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ ಜಾತ್ರೆ; ಶ್ರೀ ನಾಗೇಂದ್ರ ಸ್ವಾಮಿಗೆ ವಿಶೇಷ ಪೂಜೆ

Leave a Reply

Your email address will not be published. Required fields are marked *