ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ಮೆರವಣಿಗೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 26ರಂದು ಜಿಲ್ಲಾದ್ಯಂತ ಈದ್ ಮಿಲಾದ್ ಹಬ್ಬ ನಡೆಯಲಿರುವ ಹಿನ್ನೆಲೆಯಲ್ಲಿ, ಆಗಸ್ಟ್ 25ರಿಂದ 28ರವರೆಗೆ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ,ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ.

ಮೆರವಣಿಗೆ ವೇಳೆ ಸಿಡಿಮದ್ದು ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್ ನಡೆಸುವುದರಿಂದ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದಲ್ಲದೆ, ಇತರರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಪೊಲೀಸ್ ಅಧೀಕ್ಷಕರ ಶಿಫಾರಸಿನ ಮೇರೆಗೆ ಕರ್ನಾಟಕ ಪೊಲೀಸ್ ಕಾಯ್ದೆ–1963ರ ಕಲಂ 35 ಮತ್ತು 36ರ ಅಡಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಇರುವ ಅಧಿಕಾರವನ್ನು ಚಲಾಯಿಸಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಆಗಸ್ಟ್ 25ರಿಂದ 28ರವರೆಗೆ ಈ ಆದೇಶ ಜಾರಿಯಲ್ಲಿದ್ದು, ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿ, ಸೌಹಾರ್ದತೆ ಕಾಪಾಡಲು ಜಿಲ್ಲಾಡಳಿತ ಸಹಕರಿಸುವಂತೆ ಮನವಿ ಮಾಡಿದೆ.
















Leave a Reply