ಹೊಸನಗರದಲ್ಲಿ ಆ.30ರಂದು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

Addaheading 20260825 205746 0000 ಹೊಸನಗರದಲ್ಲಿ ಆ.30ರಂದು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ
Spread the love

ಹೊಸನಗರ: ಟ್ಟಣದ ಸಾಗರ ರಸ್ತೆಯಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನದಲ್ಲಿ ಆ.30ರ ಭಾನುವಾರ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಘವೇಂದ್ರ ಸ್ವಾಮಿ ಬೃಂದಾವನ ಸಮಿತಿ ಅಧ್ಯಕ್ಷ ವಿಜೇಂದ್ರ ಶೆಟ್ಟಿ ತಿಳಿಸಿದರು.
ಮಠದ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಶುಭ ಹಾರೈಕೆಯೊಂದಿಗೆ ಆರಾಧನಾ ಮಹೋತ್ಸವ ನಡೆಯಲಿದೆ.      ಭಾನುವಾರ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಹೊಸನಗರದ ಗಾಯತ್ರಿ ಮಂದಿರದಲ್ಲಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.


   ಗುರು ರಾಘವೇಂದ್ರ ಸ್ವಾಮಿಗಳ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಮಿತಿ ಮನವಿ ಮಾಡಿದೆ.
   ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷ ಉಮೇಶ್ ಕಂಚುಗಾರ್, ಉಪಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಕಾರ್ಯದರ್ಶಿ ರಾಧಾಕೃಷ್ಣ ಪೂಜಾರಿ, ಸಹಕಾರ್ಯದರ್ಶಿ ರಂಗನಾಥ್ ಎನ್., ಖಜಾಂಚಿ ವಾಸುದೇವ ಪಿ., ನಿರ್ದೇಶಕರಾದ ವಾದಿರಾಜ್ ಭಟ್, ಸದಾಶಿವ ಶ್ರೇಷ್ಠಿ, ಸುದೇಶ್ ಕಾಮತ್, ರವಿಶೆಟ್ಟಿ ಎನ್., ಗಣೇಶ್ ಶೆಟ್ಟಿ, ಹರೀಶ್ ಕೆ.ಆರ್., ಧನಂಜಯ ಮಂಡಾಣಿ, ಪ್ರವೀಣ್ ಕುಮಾರ್, ಎಚ್.ಎಂ. ನಿತ್ಯಾನಂದ ನಾಯಕ್, ಶ್ರೀಧರ ಮಂಡಾಣಿ, ಪ್ರಧಾನ ಅರ್ಚಕ ಟಿ.ಆರ್. ಪ್ರಸನ್ನ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

file 000000003f5c8208a0b120fec3430d9d7898467960610246772 ಹೊಸನಗರದಲ್ಲಿ ಆ.30ರಂದು ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

Leave a Reply

Your email address will not be published. Required fields are marked *