ಶಿವಮೊಗ್ಗ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL), ಬೆಂಗಳೂರು ಘಟಕದಲ್ಲಿ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ITI ಉತ್ತೀರ್ಣ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, COPA, ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮೇಕರ್, CNC ಪ್ರೋಗ್ರಾಮರ್ ಹಾಗೂ ಆಪರೇಟರ್, ಮೆಕಾನಿಕ್ (ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್) ಸೇರಿದಂತೆ ವಿವಿಧ ಟ್ರೇಡ್ಗಳಲ್ಲಿ ತರಬೇತಿ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು SSLC ಹಾಗೂ ITI ಅಂಕಪಟ್ಟಿ, ನ್ಯಾಷನಲ್ ಟ್ರೇಡ್ ಸರ್ಟಿಫಿಕೆಟ್, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಜಾತಿ/ಪಿಡಬ್ಲ್ಯೂಡಿ ಪ್ರಮಾಣಪತ್ರ (ಅಗತ್ಯವಿದ್ದಲ್ಲಿ) ಸೇರಿದಂತೆ ಮೂಲ ದಾಖಲೆಗಳು ಹಾಗೂ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಆಗಸ್ಟ್ 29ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ, ಸಾಗರ ರಸ್ತೆ, ಶಿವಮೊಗ್ಗದಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 08182-255293, 9380663606 ಅಥವಾ 9901914601 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















Leave a Reply