ಅಡ್ಡೇರಿ ಶ್ರೀ ಈಶ್ವರ ಗಣಪತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ  ₹1.50 ಲಕ್ಷ ಅನುದಾನ

Addaheading 20260901 175339 0000 ಅಡ್ಡೇರಿ ಶ್ರೀ ಈಶ್ವರ ಗಣಪತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ  ₹1.50 ಲಕ್ಷ ಅನುದಾನ
Spread the love

ರಿಪ್ಪನ್‌ಪೇಟೆ: ಮೀಪದ ಹೆದ್ದಾರಿಪುರ ವಲಯದ ಅಡ್ಡೇರಿ ಗ್ರಾಮದಲ್ಲಿರುವ ಶ್ರೀ ಈಶ್ವರ ಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ₹1,50,000 ಅನುದಾನ ಮಂಜೂರಾಗಿದ್ದು, ಅದರ ಮಂಜೂರಾತಿ ಪತ್ರವನ್ನು ಮಂಗಳವಾರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.

img 20260901 wa00056939517564021491467 ಅಡ್ಡೇರಿ ಶ್ರೀ ಈಶ್ವರ ಗಣಪತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ  ₹1.50 ಲಕ್ಷ ಅನುದಾನ

  ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ಷೇತ್ರ ಯೋಜನಾಧಿಕಾರಿ ನಾರಾಯಣ್ ಅವರು ಅನುದಾನದ ಮಂಜೂರಾತಿ ಪತ್ರವನ್ನು ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮೋಹನ್ ಹಾಗೂ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

  ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಯೋಜನಾಧಿಕಾರಿ ನಾರಾಯಣ್ , ಗ್ರಾಮೀಣ ಪ್ರದೇಶಗಳ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರಗಳ ಸಂರಕ್ಷಣೆ ಸಮಾಜದ ಒಗ್ಗಟ್ಟಿಗೆ ಪೂರಕವಾಗಿದ್ದು, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಸಂಸ್ಥೆ ಸದಾ ಸಹಕಾರ ನೀಡುತ್ತಿದೆ ಎಂದು ತಿಳಿಸಿದರು.

  ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮೋಹನ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರಿಗೆ  ಹಾಗೂ ಗ್ರಾಮಾಭಿವೃದ್ಧಿ ಯೋಜನೆಗೆ ಕೃತಜ್ಞತೆ ಸಲ್ಲಿಸಿ, ಈ ಅನುದಾನದಿಂದ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳಿಗೆ ಹೊಸ ಚೈತನ್ಯ ದೊರೆಯಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯೋಜನೆಯ ಮೇಲ್ವಿಚಾರಕ ಸುಬ್ರಮಣ್ಯ, ಸೇವಾಪ್ರತಿನಿಧಿ ಮಂಜುನಾಥ್, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

file 000000003f5c8208a0b120fec3430d9d9083133726111993724 ಅಡ್ಡೇರಿ ಶ್ರೀ ಈಶ್ವರ ಗಣಪತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ  ₹1.50 ಲಕ್ಷ ಅನುದಾನ

Leave a Reply

Your email address will not be published. Required fields are marked *