ರಿಪ್ಪನ್ಪೇಟೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ 17 ವರ್ಷದೊಳಗಿನ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆಕಸ್ಮಿಕ ಘಟನೆ ಸಂಭವಿಸಿದ್ದು, ಡಿಸ್ಕಸ್ ತಲೆಗೆ ಬಡಿದ ಪರಿಣಾಮ ದೈಹಿಕ ಶಿಕ್ಷಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಮೇರಿ ಮಾತಾ ಪ್ರೌಢಶಾಲೆಯ ದೈಹಿಕ ಶಿಕ್ಷಕ ಕಮಲಾಕರ್ ಎಂದು ಗುರುತಿಸಲಾಗಿದೆ.ಡಿಸ್ಕಸ್ ಥ್ರೋ ಸ್ಪರ್ಧೆ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ಎಸೆದ ಡಿಸ್ಕಸ್ ಆಕಸ್ಮಿಕವಾಗಿ ಮೈದಾನದಲ್ಲಿದ್ದ ಶಿಕ್ಷಕ ಕಮಲಾಕರ್ ಅವರ ತಲೆಗೆ ಬಡಿದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಹೆಚ್ಚಿನ ರಕ್ತಸ್ರಾವ ಉಂಟಾಯಿತು.
ಘಟನೆ ನಡೆದ ತಕ್ಷಣ ಅವರನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

















Leave a Reply