HOSANAGARA|ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ

Addaheading 20260903 195725 0000 HOSANAGARA|ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ
Spread the love

ಹೊಸನಗರ: ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಸೋಲು ಹಾಗೂ ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆ ದೈಹಿಕ ಆರೋಗ್ಯದ ಜೊತೆಗೆ ಓದಿನ ಏಕಾಗ್ರತೆ ಮತ್ತು ಮಾನಸಿಕ ಆರೋಗ್ಯಕ್ಕೂ ಪೂರಕವಾಗಿದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಂ.ಪಿ. ಸುರೇಶ್ ಹೇಳಿದರು.

ಹೊಸನಗರದ ನೆಹರು ಮೈದಾನದಲ್ಲಿ ನಡೆದ 2026–27ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಮೊಗ್ಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಸ್ವಾಮಿರಾವ್ ಮಾತನಾಡಿ, ತಾಲ್ಲೂಕು ಮಟ್ಟದ ಕ್ರೀಡಾಕೂಟ ಆಯೋಜನೆಗೆ ಉಪನ್ಯಾಸಕರ ತಂಡ ಒಂದು ತಿಂಗಳಿನಿಂದ ಶ್ರಮಿಸಿದ್ದು, ವಿದ್ಯಾರ್ಥಿಗಳು ಶಿಸ್ತು ಮತ್ತು ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ತಾಲ್ಲೂಕಿಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ದುಮ್ಮ ವಿನಯ್ ಕುಮಾರ್, ದಾಮೋದರ ಶಣೈ, ರವಿ, ಅಶೋಕ್ ಕುಮಾರ್, ಡೆಲ್ಲಿನ್ ಕ್ಲೆವರ್ಟ್, ಐರನ್ ಡಿಸೋಜ ಸೇರಿದಂತೆ ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.

file 000000003f5c8208a0b120fec3430d9d7324481460650797601 HOSANAGARA|ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ

Leave a Reply

Your email address will not be published. Required fields are marked *