ಹಿರಿಯರು, ಗುರುಗಳನ್ನು ಗೌರವಿಸುವ ಮಕ್ಕಳು ಜೀವನದಲ್ಲಿ ಸಾಧನೆ ಮಾಡುತ್ತಾರೆ: ಅಶ್ವಿನಿಕುಮಾರ್

Addaheading 20260911 213854 0000 ಹಿರಿಯರು, ಗುರುಗಳನ್ನು ಗೌರವಿಸುವ ಮಕ್ಕಳು ಜೀವನದಲ್ಲಿ ಸಾಧನೆ ಮಾಡುತ್ತಾರೆ: ಅಶ್ವಿನಿಕುಮಾರ್
Spread the love

ಹೊಸನಗರ: ಹಿರಿಯರು ಹಾಗೂ ಗುರುಗಳನ್ನು ಗೌರವಿಸುವ ಗುಣವನ್ನು ಬಾಲ್ಯದಲ್ಲಿಯೇ ಮಕ್ಕಳಲ್ಲಿ ಬೆಳೆಸಿದರೆ, ಅಂತಹ ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ ಎಂದು ಹೊಸನಗರ ಪದವಿ ಪೂರ್ವ ಕಾಲೇಜು ವಿಭಾಗದ ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಶ್ವಿನಿಕುಮಾರ್ ಹೇಳಿದರು.

  ಹೊಸನಗರ ಸರ್ಕಾರಿ ಪ್ರೌಢಶಾಲಾ ವಿಭಾಗದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನಾದರ್ಶಗಳನ್ನು ಸ್ಮರಿಸಿ ಆಯೋಜಿಸಿದ್ದ ಗುರುವಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೆ ಮಕ್ಕಳನ್ನು ಸುಮಾರು ಆರು ವರ್ಷಗಳ ನಂತರ ಶಾಲೆಗೆ ಕಳುಹಿಸಲಾಗುತ್ತಿತ್ತು. ಆದರೆ, ಪ್ರಸ್ತುತ ಕಾಲ ಬದಲಾಗಿದ್ದು, ಮೂರು ವರ್ಷಕ್ಕೆ ಅಂಗನವಾಡಿ, ಮೂರೂವರೆ ವರ್ಷಕ್ಕೆ ಎಲ್‌ಕೆಜಿ, ನಂತರ ಯುಕೆಜಿ ಮೂಲಕ ಮಕ್ಕಳು ಶೈಕ್ಷಣಿಕ ಬದುಕಿಗೆ ಪ್ರವೇಶಿಸುತ್ತಿದ್ದಾರೆ ಎಂದರು.

   ಇಂದಿನ ಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಸಾಕಷ್ಟು ಜ್ಞಾನವನ್ನು ಪಡೆದುಕೊಳ್ಳುತ್ತಿದ್ದಾರೆ. ಈ ವಯಸ್ಸಿನಲ್ಲಿಯೇ ಪೋಷಕರು ಹಾಗೂ ಗುರುಗಳನ್ನು ಗೌರವಿಸುವ ಸಂಸ್ಕಾರವನ್ನು ಕಲಿಸಿದರೆ, ಅವರು ಜೀವನದಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಾರೆ ಎಂದು ಹೇಳಿದರು.

  ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕರ ಬಗ್ಗೆ ಹೊಂದಿರುವ ಗೌರವ ಮತ್ತು ಕಾಳಜಿಯನ್ನು ಕಾರ್ಯರೂಪಕ್ಕೆ ತಂದು, ಶಿಕ್ಷಕರ ಹೆಸರಿನ ಮುಂದೆ ‘ಟಿಆರ್’ ನಾಮಫಲಕ ಅಳವಡಿಸಿ ಗೌರವಿಸುತ್ತಿರುವುದು ಅವಿಸ್ಮರಣೀಯ ಕ್ಷಣವಾಗಿದೆ ಎಂದು ಅಶ್ವಿನಿಕುಮಾರ್ ಹೇಳಿದರು.

  ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರೇಣುಕೇಶ್ ಸೇರಿದಂತೆ ಎಲ್ಲ ಸಹಶಿಕ್ಷಕರು ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.

file 000000003f5c8208a0b120fec3430d9d905559589867930570 ಹಿರಿಯರು, ಗುರುಗಳನ್ನು ಗೌರವಿಸುವ ಮಕ್ಕಳು ಜೀವನದಲ್ಲಿ ಸಾಧನೆ ಮಾಡುತ್ತಾರೆ: ಅಶ್ವಿನಿಕುಮಾರ್

Leave a Reply

Your email address will not be published. Required fields are marked *

error: Content is protected !!