ರಿಪ್ಪನ್ಪೇಟೆ: ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ತಾಲೂಕು ಕರ್ನಾಟಕ ಜಾನಪದ ಪರಿಷತ್ನ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 20ರಂದು ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವಿಶ್ವ ಜಾನಪದ ದಿನಾಚರಣೆ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿದೆ ಎಂದು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ತಾಲೂಕು ಜನಪದ ಪರಿಷತ್ ಅಧ್ಯಕ್ಷರಾದ ಎಂ.ಎಂ. ಪರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಜಾನಪದ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ತಾಲೂಕಿನ ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಸ್ಪರ್ಧೆಗಳು ನಡೆಯಲಿವೆ.
ರಿಪ್ಪನ್ಪೇಟೆ ಸುತ್ತಮುತ್ತಲಿನ ಜನರ ಅನುಕೂಲಕ್ಕಾಗಿ ಉಚಿತ ಕಣ್ಣಿನ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಕಾರ್ಯಕ್ರಮವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಐ ದೃಷ್ಟಿ ಕಣ್ಣಿನ ಆಸ್ಪತ್ರೆಯ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.
















Leave a Reply