14 ವರ್ಷದೊಳಗಿನ ಬಾಲಕ- ಬಾಲಕಿಯರ ತಾಲ್ಲೂಕು ಮಟ್ಟದ ಕ್ರೀಡಾಕೂಟ|ಮಕ್ಕಳ ಮಾನಸಿಕ-ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಪೂರಕ: ಬಿಇಓ ವೈ. ಗಣೇಶ್

Addaheading 20260921 190956 0000 14 ವರ್ಷದೊಳಗಿನ ಬಾಲಕ- ಬಾಲಕಿಯರ ತಾಲ್ಲೂಕು ಮಟ್ಟದ ಕ್ರೀಡಾಕೂಟ|ಮಕ್ಕಳ ಮಾನಸಿಕ-ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಪೂರಕ: ಬಿಇಓ ವೈ. ಗಣೇಶ್
Spread the love

ರಿಪ್ಪನ್‌ಪೇಟೆ: ಮಕ್ಕಳ ಕೇವಲ ವ್ಯಾಸಂಗಕ್ಕೆ ಸೀಮಿತವಾಗದೆ ಅವರಲ್ಲಿರುವ ಸುಪ್ತ ಪ್ರತಿಭೆ ಹಾಗೂ ಚಟುವಟಿಕೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ತಿಳಿಸಿದರು.
  ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹೊಸನಗರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ೨೦೨೬-೨೭ನೇ ಸಾಲಿನ 14 ವರ್ಷದೊಳಗಿನ ಬಾಲಕ-ಬಾಲಕಿಯರ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
   ಮಕ್ಕಳ ದೈಹಿಕ ಸದೃಢತೆಗೆ ಹಾಗೂ ಮಾನಸಿಕ ವಿಕಸನಕ್ಕೆ ಕ್ರೀಡೆಗಳು ಪೂರಕವಾಗಿವೆ. ವಿದ್ಯಾರ್ಥಿಗಳಲ್ಲಿ ಕ್ರೀಡಾಭಿಮಾನ ಬೆಳೆಸುವ ಮೂಲಕ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಯಬೇಕು ಎಂದು ಕರೆ ನೀಡಿದರು.
  ಕ್ರೀಡಾಕೂಟವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸೋಮಶೇಖರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಡೆದ ಬಾಲಕರ ಕಬಡ್ಡಿ ಪಂದ್ಯಾವಳಿಯು ನೆರೆದಿದ್ದ ಪ್ರೇಕ್ಷಕರು ಹಾಗೂ ಪೋಷಕರನ್ನು ರೋಮಾಂಚನಗೊಳಿಸಿತು.
   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಜಿ. ನಾಯ್ಕ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಕಾಂತ್, ತಾಲ್ಲೂಕು ಪ್ರೌಢಶಾಲೆ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಪಿ. ನಾಗರಾಜ್ ಸೇರಿದಂತೆ ಮುಖಂಡರಾದ ಬಸವಣ್ಣಪ್ಪ, ರೇಣುಕೇಶ್, ಕೆ.ಜಿ. ಪುಟ್ಟಸ್ವಾಮಿ, ಹೆಚ್. ನೀಲಾವತಿ, ಜಗದೀಶ್ ಕಾಗಿನಲ್ಲಿ, ಎಂ.ಎಂ. ಈಶ್ವರಪ್ಪ, ಮಹೇಶ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
   ಸಂತೋಷ್ ಸ್ವಾಗತಿಸಿದರು, ಸಿ.ಆರ್.ಪಿ. ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು ಹಾಗೂ ಎಸ್. ಅರವಿಂದ್ ವಂದಿಸಿದರು.

file 000000003f5c8208a0b120fec3430d9d5028380487410404843 14 ವರ್ಷದೊಳಗಿನ ಬಾಲಕ- ಬಾಲಕಿಯರ ತಾಲ್ಲೂಕು ಮಟ್ಟದ ಕ್ರೀಡಾಕೂಟ|ಮಕ್ಕಳ ಮಾನಸಿಕ-ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಪೂರಕ: ಬಿಇಓ ವೈ. ಗಣೇಶ್

Leave a Reply

Your email address will not be published. Required fields are marked *

error: Content is protected !!