ರಿಪ್ಪನ್ಪೇಟೆ: ಇಲ್ಲಿನ ಸೂಡೂರು ಗ್ರಾಮದ ಬಳಿ ಗಜಾನನ ಬಸ್ ಮತ್ತು Maruthi Alto ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ ದಿಂದ ರಿಪ್ಪನ್ಪೇಟೆ State Highway ಮಾರ್ಗವಾಗಿ ಚಲಿಸುತ್ತಿದ್ದ ಗಜಾನನ ಸಂಸ್ಥೆಯ ಬಸ್ ಹಾಗೂ ಆವಿನಹಳ್ಳಿಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಆವಿನಹಳ್ಳಿ ಮೂಲದ ಇಬ್ಬರು ತೀವ್ರ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದರು.
ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್ಪೇಟೆ ಠಾಣೆಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ.
ಅಪಘಾತಕ್ಕೆ ಅತಿಯಾದ ವೇಗ ಕಾರಣವೇ ಅಥವಾ ಅಜಾಗರೂಕ ಚಾಲನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
















Leave a Reply