ಗಾಂಧಿ ಜಯಂತಿ ವಿಶೇಷ ಗ್ರಾಮ ಸಭೆ|ವಿಬಿ-ಜಿ-ರಾಮ್-ಜಿ ಯೋಜನೆಯಡಿ ರೈತರಿಗೆ ಹೆಚ್ಚಿನ ಸೌಲಭ್ಯ: ರಾಜೇಂದ್ರ ಕುಮಾರ್

Addaheading 20261002 190241 0000 ಗಾಂಧಿ ಜಯಂತಿ ವಿಶೇಷ ಗ್ರಾಮ ಸಭೆ|ವಿಬಿ-ಜಿ-ರಾಮ್-ಜಿ ಯೋಜನೆಯಡಿ ರೈತರಿಗೆ ಹೆಚ್ಚಿನ ಸೌಲಭ್ಯ: ರಾಜೇಂದ್ರ ಕುಮಾರ್
Spread the love

ರಿಪ್ಪನ್‌ಪೇಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸುತ್ತಿರುವ ವಿಬಿಜಿ ರಾಮಜಿ ಯೋಜನೆಯಡಿ ರೈತರಿಗೆ ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರಾಜೇಂದ್ರ ಕುಮಾರ್ ತಿಳಿಸಿದರು.

  ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

20261002 094823 ಗಾಂಧಿ ಜಯಂತಿ ವಿಶೇಷ ಗ್ರಾಮ ಸಭೆ|ವಿಬಿ-ಜಿ-ರಾಮ್-ಜಿ ಯೋಜನೆಯಡಿ ರೈತರಿಗೆ ಹೆಚ್ಚಿನ ಸೌಲಭ್ಯ: ರಾಜೇಂದ್ರ ಕುಮಾರ್



  ವಿಬಿಜಿ ರಾಮಜಿ ಯೋಜನೆಯಡಿ ರೈತರು ತಮ್ಮ ಜಮೀನಿನಲ್ಲಿ ತೋಟಗಾರಿಕೆ ಅಭಿವೃದ್ಧಿಪಡಿಸಿಕೊಳ್ಳಲು, ಜಮೀನಿಗೆ ತೆರಳುವ ರಸ್ತೆ ಹಾಗೂ ಚಾನಲ್‌ಗಳ ನಿರ್ಮಾಣ ಮತ್ತು ಅಭಿವೃದ್ಧಿ, ಜಾನುವಾರು ಕೊಟ್ಟಿಗೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಗ್ರಾಮ ಪಂಚಾಯಿತಿಗೆ ಈ ಯೋಜನೆಯಡಿ ಹೆಚ್ಚಿನ ಅಧಿಕಾರ ಹಾಗೂ ಜವಾಬ್ದಾರಿ ನೀಡಲಾಗಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

20261002 101956 ಗಾಂಧಿ ಜಯಂತಿ ವಿಶೇಷ ಗ್ರಾಮ ಸಭೆ|ವಿಬಿ-ಜಿ-ರಾಮ್-ಜಿ ಯೋಜನೆಯಡಿ ರೈತರಿಗೆ ಹೆಚ್ಚಿನ ಸೌಲಭ್ಯ: ರಾಜೇಂದ್ರ ಕುಮಾರ್

  ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರು ಮಾಹಿತಿ ಪಡೆದುಕೊಂಡು ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸಲಾಗುವುದು. ಈ ಸಭೆಗಳಲ್ಲಿ ತಮ್ಮ ವಾರ್ಡ್ ವ್ಯಾಪ್ತಿಯ ಸಮಸ್ಯೆಗಳು ಹಾಗೂ ಅಗತ್ಯ ವೈಯಕ್ತಿಕ ಕಾಮಗಾರಿಗಳ ಕುರಿತು ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.

  ಗ್ರಾಮಸಭೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಕಡಿಮೆಯಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಗಾಂಧೀಜಿಯವರ ಸತ್ಯಾಗ್ರಹ ಹಾಗೂ ಸ್ವಾತಂತ್ರ್ಯ ಹೋರಾಟದ ಆದರ್ಶಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಸರ್ಕಾರದ ಯೋಜನೆಗಳ ಮಾಹಿತಿ ಪಡೆದುಕೊಂಡು ಅವುಗಳ ಸದುಪಯೋಗ ಪಡೆಯಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಗಳಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಖಾಯಂ ಪಿಡಿಓ ನೇಮಕಕ್ಕೆ ಒತ್ತಾಯ: ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯಲ್ಲಿ ಖಾಯಂ ಪಿಡಿಓ ಇಲ್ಲದಿರುವುದು ಹಾಗೂ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರ ಕೆಲಸ-ಕಾರ್ಯಗಳು ಸಕಾಲದಲ್ಲಿ ನಡೆಯುತ್ತಿಲ್ಲ ಎಂಬ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಯಿತು. ತಕ್ಷಣ ಖಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಕ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ಣಯ ಕಳುಹಿಸುವಂತೆ ಸಲಹೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಆರ್. ರಾಘವೇಂದ್ರ, ಮಾಜಿ ಸದಸ್ಯ ಸುಂದರೇಶ್, ಆರ್.ಟಿ. ಗೋಪಾಲ, ತ.ಮ. ನರಸಿಂಹ, ಪಿ. ರಮೇಶ್, ಈಶ್ವರಪ್ಪಗೌಡ ಕುಕ್ಕಳಲೇ, ಪ್ರಕಾಶ್ ಪಾಲೇಕರ್, ನರಸಿಂಹ ಸೇರಿದಂತೆ ಪಂಚಾಯಿತಿ ಸಿಬ್ಬಂದಿಗಳಾದ ನಾಗೇಶ್ ಮೊರೆ, ಲಕ್ಷ್ಮೀನಾಗರಾಜ್, ರಾಜೇಶ್, ಭೂದೇವಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

file 000000003f5c8208a0b120fec3430d9d8967595370170191577 ಗಾಂಧಿ ಜಯಂತಿ ವಿಶೇಷ ಗ್ರಾಮ ಸಭೆ|ವಿಬಿ-ಜಿ-ರಾಮ್-ಜಿ ಯೋಜನೆಯಡಿ ರೈತರಿಗೆ ಹೆಚ್ಚಿನ ಸೌಲಭ್ಯ: ರಾಜೇಂದ್ರ ಕುಮಾರ್

Leave a Reply

Your email address will not be published. Required fields are marked *

error: Content is protected !!