ರಿಪ್ಪನ್ಪೇಟೆ: ಕೋಡೂರು ಸಮೀಪದ ಯಳಗಲ್ಲು ಗ್ರಾಮದಲ್ಲಿ 30 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಯಳಗಲ್ಲು ಗ್ರಾಮದ ಸಂದೀಪ್ (30) ಎಂದು ಗುರುತಿಸಲಾಗಿದೆ. ಮನೆಯ ಹಿಂಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಂದೀಪ್ ಅವರ ಮೃತದೇಹ ಪತ್ತೆಯಾಗಿದೆ.
ವಿಷಯ ತಿಳಿದ ಕುಟುಂಬಸ್ಥರು ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಸಂದೀಪ್ ಮೃತಪಟ್ಟಿರುವುದು ದೃಢಪಟ್ಟಿದೆ.
ಘಟನೆ ಕುರಿತು ಮಾಹಿತಿ ಪಡೆದ ರಿಪ್ಪನ್ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

















Leave a Reply