ಹೊಸನಗರ: ಶ್ರೀ ದುರ್ಗಾಂಬ ದೇವಸ್ಥಾನದಲ್ಲಿ 10 ದಿನಗಳ ನವರಾತ್ರಿ ಪೂಜಾ ಉತ್ಸವ

Addaheading 20261009 192932 0000 ಹೊಸನಗರ: ಶ್ರೀ ದುರ್ಗಾಂಬ ದೇವಸ್ಥಾನದಲ್ಲಿ 10 ದಿನಗಳ ನವರಾತ್ರಿ ಪೂಜಾ ಉತ್ಸವ
Spread the love

ಹೊಸನಗರ: ಪಟ್ಟಣದ ದ್ಯಾವರ್ಸದಲ್ಲಿರುವ ಶ್ರೀ ದುರ್ಗಾಂಬ ದೇವಸ್ಥಾನದ ಆವರಣದಲ್ಲಿ ಅ.11ರಿಂದ 10 ದಿನಗಳ ಕಾಲ ನವರಾತ್ರಿ ಪೂಜಾ ಉತ್ಸವ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಎನ್. ಶ್ರೀಪತಿರಾವ್ ತಿಳಿಸಿದರು.

ದೇವಸ್ಥಾನದ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ 12.30ಕ್ಕೆ ದೇವಿಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸಲಾಗುವುದು. ಬಳಿಕ ಭಕ್ತರಿಗೆ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಅ.18ರಂದು ದುರ್ಗಾಷ್ಟಮಿ ಪ್ರಯುಕ್ತ ಶ್ರೀ ದುರ್ಗಾಹೋಮ ಆಯೋಜಿಸಲಾಗಿದ್ದು, ಮಧ್ಯಾಹ್ನ 12.30ಕ್ಕೆ ಪೂರ್ಣಾಹುತಿ ಹಾಗೂ ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ ನೆರವೇರಲಿದೆ. ನಂತರ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದರು.
   ನವರಾತ್ರಿ ಉತ್ಸವದ ಹತ್ತು ದಿನಗಳ ಪೂಜಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹಾಗೂ ದೇವಿಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಪ್ರಸಾದ ಸ್ವೀಕರಿಸುವ ಮೂಲಕ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

  ಸುದ್ದಿಗೋಷ್ಠಿಯಲ್ಲಿ ಶ್ರೀಧರ ಉಡುಪ, ವಾದಿರಾಜ್ ಭಟ್, ಸದಾಶಿವ ಶ್ರೇಷ್ಠಿ, ಸುದೇಶ್ ಕಾಮತ್, ಹರೀಶ್, ಪ್ರವೀಣ್, ಗುರುರಾಜ್, ಮುರಳೀಧರ, ಚಂದ್ರಶೇಖರ ಶೇಟ್, ವಿಜೇಂದ್ರ ಶೇಟ್, ಸಂತೋಷ್ ಶೇಟ್, ಬಾಬುರಾವ್, ರಮೇಶ್, ಗಣೇಶ್ ಶೇಟ್, ಲಕ್ಷ್ಮೀನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!