ರಿಪ್ಪನ್ಪೇಟೆ: ಸಮೀಪದ ಮುತ್ತಲ ಗ್ರಾಮದಲ್ಲಿ ಪಂಪ್ಸೆಟ್ನ ಫುಟ್ವಾಲ್ವ್ಗೆ ನೀರು ತುಂಬಲು ಕೆರೆಯ ಬಳಿ ತೆರಳಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಮೃತರನ್ನು ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಲ ಗ್ರಾಮದ ನಿವಾಸಿ ರಮೇಶ್ ಬಿನ್ ಶಿವಪ್ಪ (40) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ರಮೇಶ್ ಅವರು ಪಂಪ್ಸೆಟ್ನ ಫುಟ್ವಾಲ್ವ್ಗೆ ನೀರು ತುಂಬುವ ಉದ್ದೇಶದಿಂದ ಕೆರೆಯ ಬಳಿ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯನ್ನು ಗಮನಿಸಿದ ಮನೆಯವರು ತಕ್ಷಣ ಕೆರೆಗೆ ಇಳಿದು ರಮೇಶ್ ಅವರನ್ನು ನೀರಿನಿಂದ ಮೇಲಕ್ಕೆತ್ತಿ, ಚಿಕಿತ್ಸೆಗಾಗಿ ಹೊಸನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅವರನ್ನು ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ರಮೇಶ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಮುತ್ತಲ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಿಪ್ಪನ್ಪೇಟೆ: ಕೆರೆಗೆ ಬಿದ್ದು 40 ವರ್ಷದ ವ್ಯಕ್ತಿ ಸಾವು















Leave a Reply