ಹೊಸನಗರ: ಕಾಂಗ್ರೆಸ್ ಸರ್ಕಾರದಲ್ಲಿ ಸ್ಟಿಂಗ್ ಆಪರೇಷನ್ ಭೀತಿ, ಜನವಿರೋಧಿ ಆಡಳಿತಕ್ಕೆ ಜನರೇ ಉತ್ತರ ನೀಡಲಿದ್ದಾರೆ: ಬಿ.ವೈ ವಿಜಯೇಂದ್ರ

Addaheading 20261014 170730 0000 ಹೊಸನಗರ: ಕಾಂಗ್ರೆಸ್ ಸರ್ಕಾರದಲ್ಲಿ ಸ್ಟಿಂಗ್ ಆಪರೇಷನ್ ಭೀತಿ, ಜನವಿರೋಧಿ ಆಡಳಿತಕ್ಕೆ ಜನರೇ ಉತ್ತರ ನೀಡಲಿದ್ದಾರೆ: ಬಿ.ವೈ ವಿಜಯೇಂದ್ರ
Spread the love

ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಹಾಗೂ ಸಚಿವರಿಗೆ ಸಿಂಗ್ ಆಪರೇಷನ್ ಭೀತಿ ಎದುರಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಂತರ ಮೂರನೇ ಮುಖ್ಯಮಂತ್ರಿ ಬರಬಹುದಾದರೂ ಅಚ್ಚರಿಪಡಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು.

ಬಿಜೆಪಿಯ ಸೇವಾ ಸಂಕಲ್ಪ ಅಭಿಯಾನ–2026 ಅಂಗವಾಗಿ ಹೊಸನಗರದ ಬಸ್ ನಿಲ್ದಾಣದ ಆವರಣದಲ್ಲಿ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಿದ್ದ ಮ್ಯಾರಥಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮನೆ ಕಳೆದುಕೊಂಡ ಸಂಕಷ್ಟದಲ್ಲಿದ್ದವರಿಗೆ ₹5 ಲಕ್ಷ ಪರಿಹಾರ ನೀಡುವ ಮೂಲಕ ಯಡಿಯೂರಪ್ಪ ನೇತೃತ್ವದ ಸರ್ಕಾರ ನೆರವಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಬಡವರಿಗೆ ಮನೆ ಒದಗಿಸಲು ಹಾಗೂ ವೃದ್ಧಾಪ್ಯ ಮತ್ತು ವಿಕಲಚೇತನರ ಪಿಂಚಣಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಡೀಸೆಲ್ ಖರೀದಿಗೂ ಹಣವಿಲ್ಲದಂತಹ ಆರ್ಥಿಕ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್ ಖರೀದಿಸಲು ಹಣದ ಕೊರತೆ ಎದುರಾಗಿದೆ ಎಂದು ವಿಜಯೇಂದ್ರ ದೂರಿದರು.
   ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹34,000 ಕೋಟಿ ಮೊತ್ತದ ಯೋಜನೆಗಳನ್ನು ಘೋಷಿಸಿದ ಬೆನ್ನಲ್ಲೇ, ಯಾವುದೇ ಉಚಿತ ಯೋಜನೆಗಳನ್ನು ಘೋಷಿಸದಂತೆ ಆರ್ಥಿಕ ಇಲಾಖೆ ಎಚ್ಚರಿಕೆ ನೀಡಿದೆ. ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ನೀಡಲೂ ಹಣವಿಲ್ಲದ ಸ್ಥಿತಿಗೆ ರಾಜ್ಯ ಸರ್ಕಾರ ತಲುಪಿದೆ ಎಂದು ಟೀಕಿಸಿದರು.
   ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ ಸಿದ್ದರಾಮಯ್ಯ ಅವರನ್ನೇ ಬಲಿಪಶು ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು. ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಸಿಂಗ್ ಆಪರೇಷನ್‌ನಂತಹ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ದೂರಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರೇ ಬಹಿರಂಗವಾಗಿ ಮಾತನಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದರು.
   ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿರುವ ಯುವಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು.
   ಕಾಂಗ್ರೆಸ್ ಸರ್ಕಾರ ಬಡವರು, ರೈತರು, ಯುವಕರು ಮತ್ತು ಮಹಿಳೆಯರ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಟೀಕಿಸಿದ ಅವರು, ಜನವಿರೋಧಿ ಸರ್ಕಾರ ತೊಲಗುವವರೆಗೂ ರಾಜ್ಯದ ಜನರು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ ಎಂದು ಹೇಳಿದರು.

   ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನ ಸೇವಕರಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಶ್ಲಾಘಿಸಿದ ವಿಜಯೇಂದ್ರ, ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಕಾರ್ಯಕರ್ತರು ಸಂಘಟಿತರಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

   ಈ ಸಂಧರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ,ಮಾಜಿ ಸಚಿವ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಧನಂಜಯ್ ಸರ್ಜಿ, ಬಿಜಿಪಿ ಜಿಲ್ಲಾಧ್ಯಕ್ಷ ಜಗದೀಶ್, ಮಾಜಿ ಶಾಸಕ ಬಿ. ಸ್ವಾಮಿರಾವ್, ಎಸ್ ದತ್ತಾತ್ರಿ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

IMG 20261014 WA0014 ಹೊಸನಗರ: ಕಾಂಗ್ರೆಸ್ ಸರ್ಕಾರದಲ್ಲಿ ಸ್ಟಿಂಗ್ ಆಪರೇಷನ್ ಭೀತಿ, ಜನವಿರೋಧಿ ಆಡಳಿತಕ್ಕೆ ಜನರೇ ಉತ್ತರ ನೀಡಲಿದ್ದಾರೆ: ಬಿ.ವೈ ವಿಜಯೇಂದ್ರ

Leave a Reply

Your email address will not be published. Required fields are marked *

error: Content is protected !!