ರಿಪ್ಪನ್ ಪೇಟೆ: ವಿಭಾಗ ಮಟ್ಟದ 14 ವರ್ಷದೊಳಗಿನ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ತಂಡದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಿಪ್ಪನ್ ಪೇಟೆಯ ಶ್ರೀ ಬಸವೇಶ್ವರ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತನ್ಮಯ್ ಆರ್. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಮಂಗಳವಾರ ಕೋಲಾರದಲ್ಲಿ ನಡೆದ ವಿಭಾಗ ಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ತನ್ಮಯಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರಾಜ್ಯ ಮಟ್ಟದಲ್ಲಿ ನಡೆಯಲಿರುವ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ರಿಪ್ಪನ್ ಪೇಟೆ ಹಾಗೂ ಶಾಲೆಗೆ ಹೆಮ್ಮೆ ತಂದಿದ್ದಾರೆ.
ತನ್ಮಯ್ ಅವರು ಬಿಳಕಿ ಗ್ರಾಮದ ರವಿಕುಮಾರ್ ಮತ್ತು ಪುಷ್ಪ ದಂಪತಿಯ ಪುತ್ರ. ಓದಿನ ಜೊತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಬೆಳೆಸಿಕೊಂಡಿರುವ ಅವರು, ವಾಲಿಬಾಲ್ನಲ್ಲಿ ತೋರಿದ ಪ್ರತಿಭೆ ಹಾಗೂ ಸಾಧನೆಯ ಮೂಲಕ ಮುಂದಿನ ಹಂತದ ಸ್ಪರ್ಧೆಗೆ ಅರ್ಹತೆ ಗಳಿಸಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಶ್ರೀ ಬಸವೇಶ್ವರ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಪ್ಪ ಅವರು ಅಭಿನಂದನೆ ಸಲ್ಲಿಸಿದ್ದು, ರಾಜ್ಯ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಊರಿಗೆ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.















Leave a Reply