ರಿಪ್ಪನ್ ಪೇಟೆ: ಮಹಾರಾಷ್ಟ್ರದಲ್ಲಿ ನವೆಂಬರ್ 22ರಿಂದ 27ರವರೆಗೆ ನಡೆಯಲಿರುವ 14 ವರ್ಷದೊಳಗಿನವರ (U-14) ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ರಿಪ್ಪನ್ ಪೇಟೆಯ ಶ್ರೀ ಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತನ್ಮಯ್ ಆರ್. ಆಯ್ಕೆಯಾಗಿದ್ದಾನೆ.
ರಾಜ್ಯಮಟ್ಟದ ಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜಯನಗರ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ ತನ್ಮಯ್, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾನೆ.
ಈತ ಬಿಳಕಿ ಗ್ರಾಮದ ಶ್ರೀಮತಿ ಪುಷ್ಪ ಕೆ.ಬಿ. ಮತ್ತು ಶ್ರೀ ರವಿಕುಮಾರ್ ಎಂ.ಆರ್. ದಂಪತಿಯ ಪುತ್ರ.
ವಿದ್ಯಾರ್ಥಿಯ ಈ ಸಾಧನೆಗೆ ಮುರುಘಾಮಠದ ಪೂಜ್ಯ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಬೆಕ್ಕಿನಕಲ್ಮಠದ ಪೂಜ್ಯರು, ಶಾಲಾ ಆಡಳಿತ ಮಂಡಳಿ, ವಿವಿಧ ಸಮಿತಿಗಳ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿ, ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.
ಇವರ ಈ ಸಾಧನೆಗೆ ನಾಡಿಮೀಡಿಯಾ ಹೌಸ್ ವತಿಯಿಂದ ಅಭಿನಂದನೆಗಳು















Leave a Reply