ಆನಂದಪುರ: ಅಕ್ರಮ ಚಟುವಟಿಕೆಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ನೇತೃತ್ವದ ತಂಡ, ಕಾಡಿನಲ್ಲಿ ನಡೆಯುತ್ತಿದ್ದ ಅಕ್ರಮ ತೂರಬಿಲ್ಲೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದೆ.
ಜುಲೈ 12ರಂದು ಮಧ್ಯಾಹ್ನ, ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ತೂರಬಿಲ್ಲೆ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದರು.
ದಾಳಿಯ ವೇಳೆ ಮೂವರು ಆರೋಪಿಗಳು ಪೊಲೀಸರ ವಶಕ್ಕೆ ಸಿಕ್ಕಿದ್ದು, ಇತರೆ ಕೆಲವರು ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹4,200 ನಗದು ಹಾಗೂ ₹1 ಮುಖಬೆಲೆಯ ಎರಡು ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಸಂತೋಷ್ (ತಂದೆ ಆನಂದ), ಶಿವು (ತಂದೆ ನಾಗರಾಜ) ಹಾಗೂ ಶಾಬಾಷ್ (ತಂದೆ ಭಾಷಾಸಾಬ್) ಎಂದು ಗುರುತಿಸಲಾಗಿದೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪಿಎಸ್ಐ ಪ್ರವೀಣ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
















Leave a Reply