ಸಾಗರ: ತಾಲ್ಲೂಕಿನ ಆನಂದಪುರ ಸಮೀಪದ ಐಗಿನಬೈಲು ಗ್ರಾಮದ ತಿರುವಿನಲ್ಲಿ ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಧ್ಯಾಹ್ನ ಸಂಭವಿಸಿದೆ.
ಉಳ್ಳೂರು ಸಮೀಪದ ಕಾಸ್ಪಡಿಯಿಂದ ಆನಂದಪುರ ಮಾರ್ಗವಾಗಿ ಮಾಸೂರಿನತ್ತ ಅಡಿಕೆ ಸಸಿಗಳನ್ನು ಸಾಗಿಸುತ್ತಿದ್ದ ಲಾರಿ, ಐಗಿನಬೈಲು ತಿರುವಿನಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಪರಿಣಾಮವಾಗಿ ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಒಟ್ಟು 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆ ವೇಳೆ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಶಾಸಕ ಗೋಪಾಲಕೃಷ್ಣ ಬೇಳೂರು ತಕ್ಷಣ ಸ್ಥಳದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದರು. ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದು, ಅಗತ್ಯ ವೈದ್ಯಕೀಯ ನೆರವು ಒದಗಿಸುವಂತೆ ಸೂಚಿಸಿದರು.
ಪೊಲೀಸರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ ಅವರು, ಪಲ್ಟಿಯಾದ ಲಾರಿಯನ್ನು ಶೀಘ್ರ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅಡಚಣೆ ಆಗದಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
















Leave a Reply