ಹೊಸನಗರ: ಹೊಸನಗರ ತಾಲ್ಲೂಕಿನ ಕಸಬಾ ಹೋಬಳಿಯ ಹೊಸಕೆಸರೆ ಗ್ರಾಮದಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅರ್ಚಕರ ಹುದ್ದೆ ಖಾಲಿ ಇರುವುದರಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷದೊಳಗಿನವರಾಗಿರಬೇಕು. ವೇದ ಮಂತ್ರಗಳನ್ನು ಸ್ಪಷ್ಟವಾಗಿ ಪಠಿಸುವ ಸಾಮರ್ಥ್ಯ ಹೊಂದಿರಬೇಕು. ಆಗಮ ಶಾಸ್ತ್ರದಲ್ಲಿ ಪರಿಣತಿ ಹೊಂದಿರುವುದಕ್ಕೆ ಸಂಬಂಧಿಸಿದ ಪ್ರಮಾಣಪತ್ರ ಕಡ್ಡಾಯವಾಗಿದೆ. ಜೊತೆಗೆ, ಅರ್ಚಕರಾಗಿ ಕನಿಷ್ಠ 3 ವರ್ಷದ ಸೇವಾ ಅನುಭವವೂ ಇರಬೇಕು.
ಆಸಕ್ತ ಅಭ್ಯರ್ಥಿಗಳು ಮೇ 4, 2026ರೊಳಗಾಗಿ ಹೊಸನಗರ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಬೇಕು ಎಂದು ತಹಶೀಲ್ದಾರ್ ಭರತ್ ರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















Leave a Reply