
ರಿಪ್ಪನ್ ಪೇಟೆ : ಅರಸಾಳು ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮತ್ತು ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಕಿರಾಣಿ ಅಂಗಡಿ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬುಧವಾರ ಬೆಳಿಗ್ಗೆ ಸುಮಾರು 9.45ರ ವೇಳೆಗೆ ಅರಸಾಳು ಗ್ರಾಮದ ಬಳಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ, ಬೋರೆಗೌಡ ತಂದೆ ಮರಿಯಪ್ಪ ಅವರ ಕಿರಾಣಿ ಅಂಗಡಿ ಮುಂಭಾಗದಲ್ಲಿ ಬ್ರಾಂಡಿ ಪೌಚ್ಗಳನ್ನು ಸಾರ್ವಜನಿಕರಿಗೆ ಚಿಲ್ಲರೆಯಾಗಿ ನೀಡಲಾಗುತ್ತಿದ್ದು, ಅಲ್ಲೇ ಮದ್ಯ ಸೇವನೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.
ಮಾಹಿತಿ ಆಧರಿಸಿ ಪೊಲೀಸರು ಸಿಬ್ಬಂದಿ ಬೆಳಿಗ್ಗೆ 10.15ರ ಸುಮಾರಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಸಾರ್ವಜನಿಕ ಸ್ಥಳದಲ್ಲೇ ಮದ್ಯ ಸೇವನೆ ಮಾಡುತ್ತಿದ್ದ ಕೆಲವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದೆ.
ದಾಳಿಯ ವೇಳೆ ಆರೋಪಿತನ ಬಳಿ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್ನಲ್ಲಿ 90 ಎಂಎಲ್ ಸಾಮರ್ಥ್ಯದ “ORIGINAL CHOICE DELUXE WHISKY” ಲೇಬಲ್ ಹೊಂದಿದ್ದ 11 ಮದ್ಯದ ಪೌಚ್ಗಳು ಪತ್ತೆಯಾಗಿವೆ. ಪ್ರತಿಯೊಂದರ ಬೆಲೆ ₹50ರಂತೆ ಒಟ್ಟು ₹550 ಮೌಲ್ಯದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದೇ ವೇಳೆ “Hywards Cheers Whisky” ಲೇಬಲ್ ಹೊಂದಿದ್ದ ನಾಲ್ಕು ಖಾಲಿ ಪೌಚ್ಗಳು ಹಾಗೂ ಎರಡು ಪ್ಲಾಸ್ಟಿಕ್ ಲೋಟಗಳನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ನೀಡಿದ ಆರೋಪದಡಿ ಆರೋಪಿತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

















Leave a Reply