ರಿಪ್ಪನ್ಪೇಟೆ: ಸಮೀಪದ ಅರಸಾಳು ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಭೇಟಿ ನೀಡಿ ನಿಲ್ದಾಣದ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಿಲ್ದಾಣದ ಆವರಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ವೀಕ್ಷಿಸಿದರು.

ಅರಸಾಳು ರೈಲ್ವೆ ನಿಲ್ದಾಣದಲ್ಲಿನ ಶುಚಿತ್ವ, ಕುಡಿಯುವ ನೀರು, ನಿರ್ವಹಣೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುದಿತ್ ಮಿತ್ತಲ್, ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅತೀ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿರುವ ಅರಸಾಳು ನಿಲ್ದಾಣ ಮತ್ತು ಮಾಲ್ಗುಡಿ ಮ್ಯೂಸಿಯಂನಲ್ಲಿ ಸಮರ್ಪಕ ನಿರ್ವಹಣೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ,ಮ್ಯೂಸಿಯಂ ಅಭಿವೃದ್ಧಿಗೆ ರೈಲ್ವೆ ಇಲಾಖೆ ಹೆಚ್ಚಿನ ಆದ್ಯತೆ ನೀಡದಿರುವುದಕ್ಕೆ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮಾಲ್ಗುಡಿ ಮ್ಯೂಸಿಯಂ ಅಭಿವೃದ್ಧಿಗಾಗಿ ಅಗತ್ಯ ಹೆಚ್ಚಿನ ಅನುದಾನದ ಬೇಡಿಕೆಯನ್ನು ಈಗಾಗಲೇ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ಬಳಿಕ ಮ್ಯೂಸಿಯಂ ಅನ್ನು ಅಗತ್ಯ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ರೈಲ್ವೆ ಇಲಾಖೆಯ ಮುಖ್ಯ ಕಾರ್ಯ ರೈಲುಗಳ ಸಂಚಾರವನ್ನು ನಿರ್ವಹಿಸುವುದಾಗಿದೆ. ಸೇರಿದಂತೆ ಇತರೆ ಸ್ಥಳೀಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ರಾಜ್ಯ ಸರ್ಕಾರಗಳು ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಚಿಂತಿಸಿ ಕ್ರಮ ಕೈಗೊಳ್ಳಬೇಕು ಇಲಾಖೆಯು ಸಹಕರಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ನಂತರ ಅರಸಾಳು ರೈಲ್ವೆ ನಿಲ್ದಾಣದ ಪರಿಶೀಲಿಸಿದ ಮುದಿತ್ ಮಿತ್ತಲ್, ನಿಲ್ದಾಣದಲ್ಲಿರುವ ‘ಮಾಲ್ಗುಡಿ ಚಾಯ್’ ಕೇಂದ್ರಕ್ಕೆ ಭೇಟಿ ನೀಡಿ ಚಹಾ ಸವಿದರು.
ಈ ಸಂಧರ್ಭದಲ್ಲಿ ರೇಲ್ವೆ ಇಲಾಖೆಯ ಆರ್.ಪಿ.ಎಫ್ ಉಸ್ತುವಾರಿ ಕೊಂಡ ರೆಡ್ಡಿ, ಜಗದೀಶ್, ಮೂರ್ತಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
















Leave a Reply