ಬೇಳೂರು ಗೋಪಾಲಕೃಷ್ಣ ಸಚಿವರಾಗಲಿ: ಧರ್ಮಸ್ಥಳದಲ್ಲಿ ಮುಡಿ ಕೊಟ್ಟು ಪ್ರಾರ್ಥಿಸಿದ ಕಾಂಗ್ರೆಸ್ ಮುಖಂಡರು

ನಿವೃತ್ತ ಸೈನಿಕ ಕೆ.ವಿ ಕೃಷ್ಣಮೂರ್ತಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ 20260618 180023 0000 ಬೇಳೂರು ಗೋಪಾಲಕೃಷ್ಣ ಸಚಿವರಾಗಲಿ: ಧರ್ಮಸ್ಥಳದಲ್ಲಿ ಮುಡಿ ಕೊಟ್ಟು ಪ್ರಾರ್ಥಿಸಿದ ಕಾಂಗ್ರೆಸ್ ಮುಖಂಡರು
Spread the love
img 20260110 wa00003574100294073580266 ಬೇಳೂರು ಗೋಪಾಲಕೃಷ್ಣ ಸಚಿವರಾಗಲಿ: ಧರ್ಮಸ್ಥಳದಲ್ಲಿ ಮುಡಿ ಕೊಟ್ಟು ಪ್ರಾರ್ಥಿಸಿದ ಕಾಂಗ್ರೆಸ್ ಮುಖಂಡರು

ರಿಪ್ಪನ್‌ಪೇಟೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ದೊರಕಲಿ ಎಂಬ ಆಶಯದೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಸಿದರು.
ಇತ್ತೀಚೆಗೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಅನೇಕ ಸಚಿವರು ಕೂಡ ಅವರೊಂದಿಗೆ ಅಧಿಕಾರ ಸ್ವೀಕರಿಸಿದ್ದರು ಆಗ ಮೊದಲ ಹಂತದ ಸಚಿವರ ಪಟ್ಟಿಯಲ್ಲಿ ಬೇಳೂರು ಗೋಪಾಲಕೃಷ್ಣ ಅವರ ಹೆಸರು ಸೇರ್ಪಡೆಯಾಗಬಹುದು ಎಂಬ ನಿರೀಕ್ಷೆ ಕ್ಷೇತ್ರದ ಜನರಲ್ಲಿ ಮೂಡಿತ್ತು.ಆದರೆ ಸಚಿವರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸದ ಹಿನ್ನೆಲೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ನಿರಾಸೆ ವ್ಯಕ್ತವಾಗಿತ್ತು.

ಜೂನ್ ತಿಂಗಳ ಕೊನೆಯಲ್ಲಿ ನಡೆಯುವ ಸಾಧ್ಯತೆಯಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ದೊರಕಲೇಬೇಕು ಎಂದು ಆಶಿಸಿ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಮಳವಳ್ಳಿ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮುಡಿ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಅಲ್ಲದೆ ಕರಾವಳಿಯ ಆರಾಧ್ಯ ದೈವ ಸ್ವಾಮಿ ಕೊರಗಜ್ಜನಿಗೂ ವಿಶೇಷ ಪೂಜೆ ಸಲ್ಲಿಸಿ, ಬೇಳೂರು ಗೋಪಾಲಕೃಷ್ಣ ಅವರು ಈ ಬಾರಿ ಸಚಿವರಾಗುವಂತೆ ಪ್ರಾರ್ಥನೆ ಮಾಡಿದರು.

ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಕ್ಷೇತ್ರದ ಜನರ ಆಶಯವಾಗಿದೆ ಎಂದು ಕಾರ್ಯಕರ್ತರು ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ.

ಸಾಗರ-ಹೊಸನಗರ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೇವೆ ಅಪಾರವಾಗಿದೆ. ಹಿಂದುಳಿದ ಸಮುದಾಯಗಳ ಧ್ವನಿಯಾಗಿ ಅವರು ಕೆಲಸ ಮಾಡುತ್ತಿದ್ದಾರೆ. ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ದೊರೆಯಬೇಕು ಎಂಬುದು ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ದೇವರ ಆಶೀರ್ವಾದಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದೇವೆ. ಪಕ್ಷದ ನಾಯಕತ್ವವು ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸಿ ಅವರಿಗೆ ಸಚಿವ ಸ್ಥಾನ ನೀಡಲಿದೆ ಎಂಬ ವಿಶ್ವಾಸವಿದೆ.

- ವಿಜಯ್ ಮಳವಳ್ಳಿ, ಯೂತ್ ಕಾಂಗ್ರೆಸ್ ಮುಖಂಡ
ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಅವರ ಅನುಭವ, ಜನಪರ ಕಾಳಜಿ ಮತ್ತು ಪಕ್ಷದ ನಿಷ್ಠೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಸಾಗರ ಕ್ಷೇತ್ರದ ಜನರ ಆಶಯವೂ ಇದೇ ಆಗಿದ್ದು, ಈ ಬಾರಿ ಅವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ. ಕಾಂಗ್ರೆಸ್ ನಾಯಕತ್ವವು ನ್ಯಾಯಯುತ ನಿರ್ಧಾರ ಕೈಗೊಳ್ಳಲಿದೆ ಎಂಬ ಭರವಸೆ ನಮಗಿದೆ.

- ಫ್ಯಾನ್ಸಿ ರಮೇಶ್,ಕಾಂಗ್ರೆಸ್ ಮುಖಂಡ
img 20260604 wa00392869122675712203096 ಬೇಳೂರು ಗೋಪಾಲಕೃಷ್ಣ ಸಚಿವರಾಗಲಿ: ಧರ್ಮಸ್ಥಳದಲ್ಲಿ ಮುಡಿ ಕೊಟ್ಟು ಪ್ರಾರ್ಥಿಸಿದ ಕಾಂಗ್ರೆಸ್ ಮುಖಂಡರು

Leave a Reply

Your email address will not be published. Required fields are marked *