ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ನೂತನ 20 ಸಚಿವರ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಬಹಿರಂಗವಾಗಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಮತ್ತು ಪ್ರಭಾವಿ ನಾಯಕರಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ ಎಂದು ಆರೋಪಿಸಿದರು.

“ನಾನು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷ ಸಂಘಟನೆಗಾಗಿ ನಿರಂತರವಾಗಿ ದುಡಿದಿದ್ದರೂ ಸಚಿವ ಸ್ಥಾನ ನೀಡದೆ ನನಗೆ ಅನ್ಯಾಯ ಮಾಡಲಾಗಿದೆ. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರು ಹಾಗೂ ಹಿರಿಯ ನಾಯಕರಿಗಿಂತ ಪ್ರಭಾವಿ ಕುಟುಂಬಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ,” ಎಂದು ಅಸಮಾಧಾನ ಸ್ಫೋಟಗೊಂಡಿದೆ.
ಇದೇ ವೇಳೆ, ನಾಳೆ ಆಗಸ್ಟ್. 4 ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಣೆ ಮಾಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.
ಬೇಳೂರು ಗೋಪಾಲಕೃಷ್ಣ ಅವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನವನ್ನು ಮತ್ತಷ್ಟು ಬಹಿರಂಗಗೊಳಿಸಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಎಲ್ಲರ ಗಮನ ಹರಿದಿದೆ.

















Leave a Reply