ಕೆವೈಸಿ ನವೀಕರಣ ಹೆಸರಿನಲ್ಲಿ ನಕಲಿ ಸಂದೇಶ: ಕೆನರಾ ಬ್ಯಾಂಕ್ ಗ್ರಾಹಕರಿಗೆ ಎಚ್ಚರಿಕೆ

Addaheading 20260819 205222 0000 ಕೆವೈಸಿ ನವೀಕರಣ ಹೆಸರಿನಲ್ಲಿ ನಕಲಿ ಸಂದೇಶ: ಕೆನರಾ ಬ್ಯಾಂಕ್ ಗ್ರಾಹಕರಿಗೆ ಎಚ್ಚರಿಕೆ
Spread the love

ಹೊಸನಗರ: ಕೆನರಾ ಬ್ಯಾಂಕ್ ಖಾತೆಗಳ ಕೆವೈಸಿ ನವೀಕರಣದ ಹೆಸರಿನಲ್ಲಿ ಮೊಬೈಲ್‌ಗೆ ಬರುವ ನಕಲಿ ಸಂದೇಶಗಳಿಗೆ ಗ್ರಾಹಕರು ಯಾವುದೇ ಕಾರಣಕ್ಕೂ ಸ್ಪಂದಿಸಬಾರದು ಎಂದು ಹೊಸನಗರ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸಂದೀಪ್ ಎಂ.ಎಂ. ಎಚ್ಚರಿಕೆ ನೀಡಿದ್ದಾರೆ.
  ಹೊಸನಗರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆವೈಸಿ ನವೀಕರಿಸದಿದ್ದರೆ ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಲಾಗುತ್ತದೆ ಎಂದು ಕೆಲವರು ನಕಲಿ ಮೊಬೈಲ್ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ಇಂತಹ ಸಂದೇಶಗಳಿಗೆ ಗ್ರಾಹಕರು ಯಾವುದೇ ಕಾರಣಕ್ಕೂ ಪ್ರತಿಕ್ರಿಯಿಸಬಾರದು ಎಂದರು.


  ಕೆವೈಸಿ ನವೀಕರಣಕ್ಕಾಗಿ ಕೆನರಾ ಬ್ಯಾಂಕ್ ಶಾಖೆಯಿಂದ ಗ್ರಾಹಕರ ಮೊಬೈಲ್‌ಗೆ ಯಾವುದೇ ರೀತಿಯ ಲಿಂಕ್‌ಗಳನ್ನು ಕಳುಹಿಸುವುದಿಲ್ಲ. ಆದ್ದರಿಂದ ಇಂತಹ ಸಂದೇಶಗಳಲ್ಲಿ ಬರುವ ಲಿಂಕ್‌ಗಳನ್ನು ಕ್ಲಿಕ್ ಮಾಡಬಾರದು ಎಂದು ಸೂಚಿಸಿದರು.
ಕೆಲವು ವಂಚಕರು ಬ್ಯಾಂಕ್ ಅಧಿಕಾರಿಗಳ ಹೆಸರಿನಲ್ಲಿ ಕೆವೈಸಿ ನವೀಕರಣದ ನೆಪದಲ್ಲಿ ನಕಲಿ ಸಂದೇಶಗಳನ್ನು ಕಳುಹಿಸಿ ಗ್ರಾಹಕರ ಬ್ಯಾಂಕ್ ಖಾತೆಯ ಹಣವನ್ನು ದೋಚಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಗ್ರಾಹಕರು ಇಂತಹ ವಂಚಕರ ಜಾಲಕ್ಕೆ ಸಿಲುಕದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
  ಮೊಬೈಲ್‌ಗೆ ಇಂತಹ ಅನುಮಾನಾಸ್ಪದ ಸಂದೇಶ ಬಂದರೆ ಯಾವುದೇ ಆ್ಯಪ್ ಡೌನ್‌ಲೋಡ್ ಮಾಡದೆ, ಸಮೀಪದ ಕೆನರಾ ಬ್ಯಾಂಕ್ ಶಾಖೆಗೆ ತೆರಳಿ ಸಿಬ್ಬಂದಿಯೊಂದಿಗೆ ವಿಚಾರಿಸಬೇಕು ಎಂದು ಸಂದೀಪ್ ಎಂ.ಎಂ. ಸಲಹೆ ನೀಡಿದರು.


ಕೆವೈಸಿ ನವೀಕರಣ ಸೇರಿದಂತೆ ಯಾವುದೇ ಕಾರಣಕ್ಕೂ ಬ್ಯಾಂಕ್‌ಗಳು ಮೊಬೈಲ್ ಮೂಲಕ ಗ್ರಾಹಕರಿಗೆ ಲಿಂಕ್ ಕಳುಹಿಸುವುದಿಲ್ಲ. ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡಬಾರದು ಹಾಗೂ ಒಟಿಪಿ, ಪಿನ್, ಪಾಸ್‌ವರ್ಡ್ ಸೇರಿದಂತೆ ಯಾವುದೇ ಗೌಪ್ಯ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಗ್ರಾಹಕರಿಗೆ ಎಚ್ಚರಿಕೆ ನೀಡಿದರು.

file 000000003f5c8208a0b120fec3430d9d2841277861253876413 ಕೆವೈಸಿ ನವೀಕರಣ ಹೆಸರಿನಲ್ಲಿ ನಕಲಿ ಸಂದೇಶ: ಕೆನರಾ ಬ್ಯಾಂಕ್ ಗ್ರಾಹಕರಿಗೆ ಎಚ್ಚರಿಕೆ

Leave a Reply

Your email address will not be published. Required fields are marked *