ಉಚಿತ ತರಬೇತಿಗೆ ಅರ್ಜಿ ಆಹ್ವಾನ

NAADI NEWS 20260306 103005 0000 ಉಚಿತ ತರಬೇತಿಗೆ ಅರ್ಜಿ ಆಹ್ವಾನ
Spread the love

ಶಿವಮೊಗ್ಗ: ತಾಲೂಕಿನ ಹೊಳಲೂರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ವಿವಿಧ ಕೋರ್ಸ್‌ಗಳಿಗೆ ಉಚಿತ ತರಬೇತಿ ಹಮ್ಮಿಕೊಂಡಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಬ್ರೌಸ್ ಡಿಸೈನ್,ತರಬೇತಿ, ಕೃಷಿ ಉದ್ಯಮಿ, ಜೇನು ಸಾಕಣೆ, ಅಣಬೆ ಬೇಸಾಯ, ಎಂಬ್ರಾಯಿಡರಿ, ಮಹಿಳಾ ಟೈಲರಿಂಗ್ ತರಬೇತಿ, ಹಪ್ಪಳ, ಉಪ್ಪಿನಕಾಯಿ ತಯಾರಿಕೆ, ಬ್ಯೂಟಿ ಪಾರ್ಲರ್ ಮ್ಯಾನೆಜ್‌ಮೆಂಟ್, ಎಲೆಕ್ಟಿಕಲ್ ಮೋಟರ್ ರಿವೈಂಡಿಂಗ್ ತರಬೇತಿ ನೀಡಲಾಗುವುದು.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿರಬೇಕು. ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹೊಂದಿದ್ದು, ಉಚಿತ ತರಬೇತಿ ಪಡೆದ ನಂತರ ಸ್ವ-ಉದ್ಯೋಗ ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ.

ಆಸಕ್ತರು ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಹೊನ್ನಾಳಿ ರಸ್ತೆ, ಹೊಳಲೂರು, ಶಿವಮೊಗ್ಗ ತಾಲೂಕು ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಮೊ. 8722384541, 9481955721 ಎಂದು  ಪ್ರಕಟಣೆ ತಿಳಿಸಿದೆ.


Spread the love

Leave a Reply

Your email address will not be published. Required fields are marked *