ಡಿಕ್ಕಿಯ ರಭಸಕ್ಕೆ 11 ಕೆ.ವಿ. ವಿದ್ಯುತ್ ಕಂಬ ತುಂಡು !
ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಫೋರ್ಡ್ ಐಕಾನ್ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕೋಡೂರು ಸಮೀಪದ ಶಾಂತಪುರದಲ್ಲಿ ಇಂದು ಸಂಜೆ ನಡೆದಿದೆ
ಕಾರಿನಲ್ಲಿ ಇಬ್ಬರು ಪುರುಷರು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರೂ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಾಳುಗಳು ಶಿವಮೊಗ್ಗ ಮೂಲದವರು ಎಂದು ತಿಳಿದುಬಂದಿದೆ.
ನಗರ ಮಾರಿಕಾಂಬಾ ಜಾತ್ರೆಗೆ ತೆರಳಿದ್ದ ಪ್ರಯಾಣಿಕರು ಶಿವಮೊಗ್ಗಕ್ಕೆ ವಾಪಾಸ್ ಆಗುವ ವೇಳೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ 11 ಕೆ.ವಿ. ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದು, ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.















Leave a Reply