
ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ಸಂದರ್ಶಕರ ಕೊಠಡಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಿಇಐಆರ್ (CEIR) ಪೋರ್ಟಲ್ ಮೂಲಕ ಪತ್ತೆಹಚ್ಚಲಾದ ಸುಮಾರು 100 ಕಳೆದುಹೋದ ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಬಳಿಕ ಮಾತನಾಡಿದ ಎಸ್ಪಿ ನಿಖಿಲ್ ಬಿ., ರಾಜ್ಯ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಸಂದರ್ಶಕರ ಕೊಠಡಿಯನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಜನವರಿ 2026ರಿಂದ ಇದುವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 1,000ಕ್ಕೂ ಹೆಚ್ಚು ಕಳೆದುಹೋದ ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲೇ ಸುಮಾರು 100 ಮೊಬೈಲ್‌ಗಳನ್ನು ಪತ್ತೆಹಚ್ಚಿ ಇಂದು ವಿತರಿಸಲಾಗಿದೆ ಎಂದು ಹೇಳಿದರು.

ಸಾರ್ವಜನಿಕರು ಕಳೆದುಹೋದ ಮೊಬೈಲ್‌ಗಳ ಬಗ್ಗೆ ಸಿಇಐಆರ್ ಪೋರ್ಟಲ್ ಮೂಲಕ ಮನೆಯಲ್ಲಿಯೇ ದೂರು ದಾಖಲಿಸಬಹುದಾಗಿದೆ. ಮೊಬೈಲ್ ಪತ್ತೆಯಾದ ಬಳಿಕ ಸಂಬಂಧಪಟ್ಟ ಠಾಣೆಯಿಂದ ಮಾಹಿತಿ ನೀಡಲಾಗುತ್ತದೆ. ಈ ವ್ಯವಸ್ಥೆಯಿಂದ ಸಾವಿರಾರು ಜನರಿಗೆ ಅನುಕೂಲವಾಗಿದೆ ಎಂದರು.
ಇದೇ ವೇಳೆ ಕುಂಸಿ ಠಾಣೆ ವ್ಯಾಪ್ತಿಯ ಸುತ್ತುಕೋಟೆ ಗ್ರಾಮದಲ್ಲಿ ನಡೆದ ಪ್ರವೀಣ್ ಕೊಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಆರೋಪಿಗಳ ಪತ್ತೆಗೆ ಈಗಾಗಲೇ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಗಂಗಾಧರ್, ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸತ್ಯನಾರಾಯಣ, ಕೋಟೆ ಪಿಐ ಹರೀಶ್ ಕೆ. ಪಾಟೀಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
















Leave a Reply