ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.22 ರವರೆಗೆ ಅವಧಿ ವಿಸ್ತರಣೆ

ಗ್ರಾಮೀಣ ಯುವಕರಿಗಾಗಿ ಎರಡು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ 1200 x 800 ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.22 ರವರೆಗೆ ಅವಧಿ ವಿಸ್ತರಣೆ
Spread the love

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆಬ್ರವರಿ 22ರವರೆಗೆ ವಿಸ್ತರಿಸಲಾಗಿದೆ.
ಈವರೆಗೆ ಸುಮಾರು 2.9 ಲಕ್ಷ ವಿದ್ಯಾರ್ಥಿಗಳು ಆಧಾರ ಸಂಯೋಜನೆ ಮಾಡಿಕೊಂಡಿದ್ದು, 2.5 ಲಕ್ಷ ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಅರ್ಜಿ ಸಲ್ಲಿಕೆಗೆ ಫೆ.17 ಕೊನೆಯ ದಿನವಾಗಿತ್ತು. ಆದರೆ, ವಿದ್ಯಾರ್ಥಿಗಳ ಮನವಿಯ ಮೇರೆಗೆ ಫೆ.24 ಕೊನೆಯ ದಿನ ಎಂದು ಪ್ರಾಧಿಕಾರ ಆಡಳಿತಾಧಿಕಾರಿ ತಿಳಿಸಿದ್ದಾರೆ.

ಎಸ್‌ಎಟಿಎಸ್ ಮೂಲಕ 1.8 ಲಕ್ಷ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಆನ್‌ಲೈನ್‌ ಮೂಲಕ, ಕಾಲೇಜು ಹಂತದಲ್ಲಿ 35 ಸಾವಿರ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ಇರುವ ಲೋಪ, ತಪ್ಪುಗಳನ್ನು ಸರಿಪಡಿಸಿಕೊಳ್ಳ ಬಹುದು ಎಂದು ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *