ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಸಬಲೀಕರಣದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ – ಶಾಸಕ ಎಸ್.ಎನ್. ಚನ್ನಬಸಪ್ಪ

IMG 20260427 WA0008 ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಸಬಲೀಕರಣದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ - ಶಾಸಕ ಎಸ್.ಎನ್. ಚನ್ನಬಸಪ್ಪ
Spread the love

ಶಿವಮೊಗ್ಗ :ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ‘ನಾರಿ ಶಕ್ತಿ ವಂದನ ಅಧಿನಿಯಮ’ವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಖಂಡನೀಯ ಎಂದು ಶಿವಮೊಗ್ಗ ನಗರ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಸಬಲೀಕರಣದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ. ಅಧಿಕಾರಕ್ಕಾಗಿ ಹಂಬಲಿಸುವ ಕಾಂಗ್ರೆಸ್, ಮಹಿಳೆಯರಿಗೆ ಸಿಗಬೇಕಾದ ಮೀಸಲಾತಿಯನ್ನು ತಡೆಯುವ ಮೂಲಕ ತನ್ನ ನೈಜ ಮುಖವನ್ನು ಬಯಲು ಮಾಡಿದೆ.” ಎಂದು ತಿಳಿಸಿದರು.

img 20260427 wa00134126384139630991900 ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಸಬಲೀಕರಣದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ - ಶಾಸಕ ಎಸ್.ಎನ್. ಚನ್ನಬಸಪ್ಪ


ಪ್ರತಿಭಟನೆಯಲ್ಲಿ ಸಂಸದರಾದ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಆರ್ ಕೆ ಸಿದ್ದರಾಮಣ್ಣ, ಶ್ರೀ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಮಧುರ ಶಿವಾನಂದ್, ಮಹಿಳಾ ಮೋರ್ಚಾ ನಗರಾಧ್ಯಕ್ಷರಾದ ಶ್ರೀಮತಿ ರಶ್ಮಿ ಶ್ರೀನಿವಾಸ್, ಜಿಲ್ಲಾ  ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಮಂಜುಳಾ ಶ್ರೀನಿವಾಸ್ ಸೇರಿದಂತೆ ನೂರಾರು ಸಂಖ್ಯೆಯ ಆಕ್ರೋಶಿತ ಮಹಿಳಾ ಕಾರ್ಯಕರ್ತೆಯರು, ಬಿಜೆಪಿಯ ಪ್ರಮುಖರು ಭಾಗವಹಿಸಿದ್ದರು.

img 20260423 wa00569157198357689020355 ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಸಬಲೀಕರಣದ ಬಗ್ಗೆ ಕಿಂಚಿತ್ತೂ ಗೌರವವಿಲ್ಲ - ಶಾಸಕ ಎಸ್.ಎನ್. ಚನ್ನಬಸಪ್ಪ

Leave a Reply

Your email address will not be published. Required fields are marked *