ಬಾಗಲಕೋಟೆ-ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

4hnr1photo con ಬಾಗಲಕೋಟೆ-ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ
Spread the love
img 20260110 wa00008143103915645498824 ಬಾಗಲಕೋಟೆ-ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಹೊಸನಗರ:ರ್ನಾಟಕ ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹೊಸನಗರದಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

img 20260427 wa00137038094212382070811 ಬಾಗಲಕೋಟೆ-ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಸುಮಾರು 21 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ದಾವಣಗೆರೆ ಕ್ಷೇತ್ರದಲ್ಲಿ ಸಮರ್ಥ ಶಾಮನೂರು ಅವರು ಸುಮಾರು 5 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ವಿಜಯಶಾಲಿಗಳಾಗಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಹೊಸನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಎದುರು ಸಂಭ್ರಮಾಚರಣೆ ಜರುಗಿತು.

img 20260423 wa00564207127757478894724 ಬಾಗಲಕೋಟೆ-ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು: ಹೊಸನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಅಭಿನಂದನೆ ಸಲ್ಲಿಸಿದರು. ಜಯದ ಘೋಷಣೆಗಳೊಂದಿಗೆ ಪ್ರದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಸದಾಶಿವ ಶ್ರೇಷ್ಠಿ, ಎಂ.ಪಿ. ಸುರೇಶ್, ಮಾಜಿ ಅಧ್ಯಕ್ಷ ಬಿ.ಜಿ. ನಾಗರಾಜ್, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ನೇತ್ರಾವತಿ, ನೂರ ಮೇಟಿಲ್ಡಾ ಸ್ವೀಕ್ವರಾ, ಅಣ್ಣಪ್ಪ, ಪ್ರಶಾಂತ್, ಗಣೇಶ್ ಬಾಳೆಕೊಪ್ಪ, ಮಂಜುನಾಥ್ ಶ್ರೇಷ್ಠಿ, ಗುರುರಾಜ್ ಜಯನಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *