ರಿಪ್ಪನ್ ಪೇಟೆ : ಪಟ್ಟಣದ ಹಿಂದೂ ರುದ್ರಭೂಮಿಯ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಿಲಿಕಾನ್ ಚೇಂಬರ್ ಅಳವಡಿಸಿ, ಅದನ್ನು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಹತ್ತಾಂತರಿಸಿ ಮಾತನಾಡಿದ ಜಿಲ್ಲಾ ನಿರ್ದೇಶಕ ಮುರುಳಿಧರ್ ಶೆಟ್ಟಿ ಅವರು, ಪರಮಪೂಜ್ಯ ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನೇಕ ಜನಪರ ಸೇವಾ ಕಾರ್ಯಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. ಮುಕ್ತಿಧಾಮದ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಸಿಲಿಕಾನ್ ಚೇಂಬರ್ ಅಳವಡಿಕೆ ಮಾಡಲಾಗಿದೆ. ಇದರ ಮೂಲಕ ಮೃತದೇಹಗಳನ್ನು ವ್ಯವಸ್ಥಿತವಾಗಿ ಮತ್ತು ಗೌರವಯುತವಾಗಿ ಅಂತ್ಯಕ್ರಿಯೆ ನೆರವೇರಿಸಲು ಅನುಕೂಲವಾಗಲಿದೆ ಎಂದು ಹೇಳಿದರು.ಗ್ರಾಮ ಪಂಚಾಯತಿಯ ಸಹಕಾರ ಹಾಗೂ ಸ್ಥಳೀಯರ ಬೇಡಿಕೆಯಂತೆ ಈ ಸೌಲಭ್ಯವನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತಿ ಇದನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇದೇ ರೀತಿ ಸಮಾಜದ ಒಳಿತಿಗಾಗಿ ಎಲ್ಲರೂ ಕೈಜೋಡಿಸಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳೋಣ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಮಾತನಾಡಿ ಧರ್ಮಸ್ಥಳ ದೇವಸ್ಥಾನದ ಹುಂಡಿಗೆ ಸಲ್ಲಿಸುವ ಕಾಣಿಕೆ ಭಕ್ತರ ಕಲ್ಯಾಣ ಕಾರ್ಯಗಳ ರೂಪದಲ್ಲಿ ಸಮಾಜಕ್ಕೆ ಮರಳಿ ಬರುತ್ತದೆ ಎಂದು ಹೇಳಿದರು.
ಮಾಜಿ ಸದಸ್ಯ ಪಿ. ರಮೇಶ್ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಸದಾ ಧರ್ಮ ಮತ್ತು ಸಮಾಜದ ಪರ ನಿಂತು ಕಾರ್ಯನಿರ್ವಹಿಸುತ್ತಿದ್ದು, ಜನೋಪಯೋಗಿ ಯೋಜನೆಗಳ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಬಾಲಕೃಷ್ಣ,ತಾಲೂಕು ಯೋಜನಾಧಿಕಾರಿ ಪ್ರದೀಪ್, ಹರೀಶ್, ತಾಲೂಕು ಜನಜಾಗೃತಿ ಸಮಿತಿಯ ನಾಗರತ್ನ ದೇವರಾಜ್,ಮಂಜಣ್ಣ,ಗ್ರಾಮ ಪಂಚಾಯತಿ ಪಿಡಿಓ ನಾಗರಾಜ್, ಮಾಜಿ ಸದಸ್ಯ ಸುಂದ್ರೇಶ್, ನಿರೂಪ್ ಕುಮಾರ್, ಗಣಪತಿ, ಜಿ.ಡಿ.ಮಲ್ಲಿಕಾರ್ಜುನ,ಮಧುಸೂದನ್,ರೇಖಾ ರವಿ, ಶೈಲಾ ಪ್ರಭು, ದಾನೇಶ್, ಬಿ.ರಾಘವೇಂದ್ರ,ಮಂಜಪ್ಪ,ನಟರಾಜ್, ಗ್ರಾ. ಪಂ ಸಿಬ್ಬಂದಿ ಸೇರಿದಂತೆ ಒಕ್ಕೂಟದ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
















Leave a Reply