ರಿಪ್ಪನ್ ಪೇಟೆ: ಪಟ್ಟಣದ ವಿನಾಯಕನಗರದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 27ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಏಪ್ರಿಲ್ 2ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಬೆಳಿಗ್ಗೆ ಕಲಾ ಹೋಮ, ಕುಂಭಾಭಿಷೇಕ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ದುರ್ಗಾಪರಮೇಶ್ವರಿ ಸೇವಾ ಸಮಿತಿ, ಗ್ರಾಮಸ್ಥರು ಹಾಗೂ ವಿನಾಯಕನಗರದವರು ವಿನಂತಿಸಿದ್ದಾರೆ.
















Leave a Reply