ರಿಪ್ಪನ್ ಪೇಟೆ :ಸಮೀಪದ ಕೋಡೂರು ಪಂಚಾಯತ್ ನ ಶಾಂತಪುರ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋಬ್ಬ ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಪ್ರಕರಣ ಬುಧವಾರ ಬೆಳಕಿಗೆ ಬಂದಿದೆ.
ಗಸ್ತು ವೇಳೆಯಲ್ಲಿ ಅನುಮಾನಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ಹೊಸನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಪರೀಕ್ಷೆಯ ನಂತರ ವೈದ್ಯರು ಆತ ಗಾಂಜಾ ಸೇವನೆ ಮಾಡಿರುವುದನ್ನು ದೃಢಪಡಿಸಿದ್ದಾರೆ.
ಆತನನ್ನು ಶಾಂತಪುರ ಗ್ರಾಮದ ಮಹಮ್ಮದ್ ರಫೀಕ್ ಬಿನ್ ಹಸನ್ ಸಾಬ್ (54) ಎಂದು ಗುರುತಿಸಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಆತನ ವಿರುದ್ಧ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
















Leave a Reply