ಹೆದ್ದಾರಿಪುರ: ಸರ್ಕಾರಿ ಪ್ರೌಢಶಾಲೆಯು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದ್ದು, ಸರ್ಕಾರಿ ಶಾಲೆಗಳೂ ಖಾಸಗಿ ಶಾಲೆಗಳಿಗಿಂತ ಯಾವುದಕ್ಕೂ ಕಡಿಮೆಯಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಒಟ್ಟು ವಿದ್ಯಾರ್ಥಿಗಳಲ್ಲಿ 5 ಮಂದಿ ಅತ್ಯುನ್ನತ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 19 ಮಂದಿ ಫಸ್ಟ್ ಕ್ಲಾಸ್ ಹಾಗೂ 4 ಮಂದಿ ಸೆಕೆಂಡ್ ಕ್ಲಾಸ್ನಲ್ಲಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಶಾಲೆಯ ಶೈಕ್ಷಣಿಕ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ.
ವೈಯಕ್ತಿಕ ಸಾಧನೆಯಲ್ಲಿ ಅಕಾಶ್ ಕೆ. ಒ 582 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದರೆ, ಜಾಹ್ನವಿ ಸಿ. ಎಚ್ 573 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಮತ್ತು ಪ್ರೀತಿ ಕೆ. ಆರ್ 571 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಅಧ್ಭುತ ಸಾಧನೆ ಮಾಡಿದ್ದಾರೆ.
ಶಾಲೆಯ ಶಿಕ್ಷಕರ ಸಮರ್ಪಿತ ಬೋಧನೆ, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಪೋಷಕರ ಸಹಕಾರವೇ ಈ ಸಾಧನೆಗೆ ಕಾರಣವೆಂದು ಶಾಲಾ ವಲಯದಲ್ಲಿ ಸಂತೋಷ ವ್ಯಕ್ತವಾಗಿದೆ.
ಈ ಸಾಧನೆಗೆ ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷರು ಮತ್ತು ಸದಸ್ಯರು , ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾರ್ವಜನಿಕರು ಅಭಿನಂದಿಸಿದ್ದಾರೆ.
ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ನಾಡಿ ಮೀಡಿಯಾ ಹೌಸ್ ವತಿಯಿಂದ ಅಭಿನಂದನೆಗಳು

















Leave a Reply