ಶಿವಮೊಗ್ಗ: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ತಾಯಿ ಶ್ರೀಮತಿ ಚೆನ್ನಮ್ಮ (89) ಅವರ ನಿಧನಕ್ಕೆ ಹೊಸನಗರ ತಾಲೂಕಿನ ಶ್ರೀ ಹೊಂಬುಜ ಜೈನ ಮಠದ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಶ್ರೀಮತಿ ಚೆನ್ನಮ್ಮ ಅವರು ಸರಳತೆ, ಸಂಸ್ಕಾರ ಮತ್ತು ಕುಟುಂಬ ಮೌಲ್ಯಗಳ ಪ್ರತಿರೂಪವಾಗಿದ್ದರು. ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಆದರ್ಶ ಗೃಹಿಣಿಯಾಗಿ ಬದುಕಿದ ಅವರು ಧರ್ಮಪಾಲನೆ ಹಾಗೂ ಸೇವಾ ಮನೋಭಾವದಿಂದ ಸಮಾಜಕ್ಕೆ ಮಾದರಿಯಾಗಿದ್ದರು ಎಂದು ಸ್ಮರಿಸಿದ್ದಾರೆ.
ಶ್ರೀಮತಿ ಚೆನ್ನಮ್ಮ ಅವರ ಅಗಲಿಕೆಯಿಂದ ದೇವೇಗೌಡ ಅವರ ಕುಟುಂಬಕ್ಕೆ ಹಾಗೂ ಬಂಧು-ಬಳಗಕ್ಕೆ ಅಪಾರ ದುಃಖ ಉಂಟಾಗಿದೆ. ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಶ್ರೀ ಪದ್ಮಾವತಿ ದೇವಿಯವರು ಅಗಲಿದ ಆತ್ಮಕ್ಕೆ ಚಿರಶಾಂತಿ ನೀಡಲಿ. ದೇವೇಗೌಡ ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನಕ್ಕೆ ಹೊಂಬುಜ ಜೈನ ಮಠದ ಸಂತಾಪ














Leave a Reply