ಹುಂಚ :ಐತಿಹಾಸಿಕ ಜೈನ ಧಾರ್ಮಿಕ ಕ್ಷೇತ್ರವಾದ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ದಿವ್ಯ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವವು ಭಕ್ತಿಭಾವದಿಂದ ಅದ್ದೂರಿಯಾಗಿ ನೆರವೇರಿತು.
ಮೂಲಾ ನಕ್ಷತ್ರದ ಪ್ರಯುಕ್ತ ಮಧ್ಯಾಹ್ನ ಸುಮಾರು 12.30 ಗಂಟೆಗೆ ರಥಾರೋಹಣ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ “ಶ್ರೀ ಪಾರ್ಶ್ವನಾಥ ಕೀ ಜೈ”, “ಶ್ರೀ ಪದ್ಮಾವತಿ ದೇವಿ ಕೀ ಜೈ”, “ಅಹಿಂಸಾ ಪರಮೋ ಧರ್ಮ” ಎಂಬ ಜಯಘೋಷಗಳು ಮೊಳಗಿದವು. ಭಕ್ತರು ದೇವರ ದರ್ಶನ ಪಡೆದು ಭಕ್ತಿ ಭಾವದಲ್ಲಿ ತಲ್ಲೀನರಾದರು.

ಶ್ರೀ ಜೈನಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮಹಾನೈವೇದ್ಯ ಪೂಜೆ, ಬಲಿ ಉತ್ಸವ ಸೇರಿದಂತೆ ಅನೇಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನಡೆಯಿತು.
ಕಂಬದಹಳ್ಳಿ ಪರಮಪೂಜ್ಯ ಸ್ವಸ್ತಿ ಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಸಂಜೆ ನಡೆದ ಮಹಾರಥಯಾತ್ರಾ ಶೋಭಾಯಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಭಕ್ತಿಭಾವ ವ್ಯಕ್ತಪಡಿಸಿದರು. ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಸೇವಾಕರ್ತರಾದ ಶ್ರೀ ವಿಜಯ ಪಾಟ್ನಿ, ಶ್ರೀಮತಿ ಸರಿತಾ ಪಾಟ್ನಿ, ಧನಲಕ್ಷ್ಮಿ ಕುಟುಂಬ ಹಾಗೂ ಇಂಫಾಲ್ ಮಣಿಪುರದ ಭಕ್ತದ ಉಪಸ್ಥಿತರಿದ್ದರು.
















Leave a Reply