ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಇಬ್ಬರ ವಶ!?

Blue and Red Voter Education Banner 20260420 180353 0000 scaled ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಇಬ್ಬರ ವಶ!?
Spread the love

ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕಿನ ಬೆಳೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಆರೋಪಿಗಳು ಚಂದ್ರಪ್ಪ (60) ಮತ್ತು ಶರತ್ (40) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ತಮ್ಮ ಕಿರಾಣಿ ಅಂಗಡಿ ಮುಂಭಾಗ ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದರು ಎಂಬ ಮಾಹಿತಿ ಮೇರೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದರು.

ಈ ವೇಳೆ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಇಬ್ಬರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

img 20260325 wa00245009774080835388966 ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಇಬ್ಬರ ವಶ!?

Leave a Reply

Your email address will not be published. Required fields are marked *