
ಹೊಸನಗರ : ಹೊಸನಗರ ದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಗುರುಶಕ್ತಿ ಸ್ಲೀಪರ್ ಬಸ್ ಬುಧವಾರ ಬೆಳಗಿನ ಜಾವ 4 ಗಂಟೆಯ ವೇಳೆಗೆ ತುಮಕೂರು ಜಿಲ್ಲೆಯ ಶಿರಾ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕಿಡಾಗಿದೆ.
ಹೆದ್ದಾರಿಯ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಈರುಳ್ಳಿ ಹೊತ್ತ ಲಾರಿಯ ಹಿಂಬಂದಿಗೆ ಗುರುಶಕ್ತಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಉಂಟಾಗಿದೆ ಎಂದು ಎನ್ನಲಾಗಿದೆ.

ಅಪಘಾತ ನಡೆದ ವೇಳೆಯಲ್ಲಿ ಗುರುಶಕ್ತಿ ಬಸ್ ನಲ್ಲಿ 30 ಮಂದಿ ಪ್ರಯಾಣಿಕರು ಇದ್ದರು ಎಂದು ಮಾಹಿತಿ ತಿಳಿದುಬಂದಿದೆ. ಡಿಕ್ಕಿ ಹೊಡೆದ ತೀವ್ರತೆಗೆ ಬಸ್ ನ ಮುಂಭಾಗ ಒಂದು ಬದಿ ಸಂಪೂರ್ಣ ಜಖಂ ಆಗಿದ್ದು, ಘಟನೆ ನಡೆದ ತಕ್ಷಣವೇ ಸ್ಥಳೀಯರು ಹಾಗೂ ಪೋಲಿಸರು ಸ್ಥಳಕ್ಕೆ ಬಂದು ಗಾಯಾಳುಗಳಿಗೆ ನೆರವು ನೀಡಿದ್ದಾರೆ.
ಘಟನೆಯಲ್ಲಿ ಬಸ್ ಚಾಲಕನ ಕಾಲಿಗೆ ಗಾಯವಾಗಿದ್ದು,ಇತರ ಕೆಲವು ಪ್ರಯಾಣಿಕರಿಗೆ ಚಿಕ್ಕ-ಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಸಮೀಪದ
ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ .ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಗಳು ಆಗಿಲ್ಲವೆಂದು ಮೂಲಗಳು ತಿಳಿಸಿವೆ.

ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಡೆತಡೆ ಉಂಟಾಗಿದ್ದ ಪರಿಣಾಮ ಸಂಬಂಧಿಸಿದ ಪೋಲಿಸರು ಅದನ್ನು ನಿಯಂತ್ರಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧಿತ ಶಿರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನೆಯ ಕುರಿತು ತನಿಖೆ ಮುಂದುವರೆದಿದೆ.
#SHIVAMOGGA #HOSANAGARA #BENGALURU #ACCIDENT















Leave a Reply