ಹೊಸನಗರ :ಪಿಯುಸಿ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡ ಉಪನ್ಯಾಸಕರು

Screenshot 20260525 212303 Canva ಹೊಸನಗರ :ಪಿಯುಸಿ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡ ಉಪನ್ಯಾಸಕರು
Spread the love
img 20260110 wa00001001916421617505421 ಹೊಸನಗರ :ಪಿಯುಸಿ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡ ಉಪನ್ಯಾಸಕರು

ಹೊಸನಗರ: ರ್ಕಾರದ ಅಧಿಸೂಚನೆಯಂತೆ ಮೇ 25ರಿಂದ ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್ ತಿಳಿಸಿದ್ದಾರೆ.

img 20260427 wa00132569630277884450466 ಹೊಸನಗರ :ಪಿಯುಸಿ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡ ಉಪನ್ಯಾಸಕರು

ಸೋಮವಾರ ಬೆಳಗ್ಗೆ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಕಾಲೇಜು ಉತ್ತಮ ಫಲಿತಾಂಶ ದಾಖಲಿಸಿದ್ದು, ಈ ವರ್ಷವೂ ಇನ್ನಷ್ಟು ಉತ್ತಮ ಸಾಧನೆ ಮಾಡಲು ಉಪನ್ಯಾಸಕರು ಶ್ರಮಿಸುತ್ತಿದ್ದಾರೆ ಎಂದರು.
ಕಾಲೇಜಿನಲ್ಲಿ ಅನುಭವಸಂಪನ್ನ ಉಪನ್ಯಾಸಕರಿದ್ದು, ಪ್ರತಿವರ್ಷ ಉತ್ತಮ ಫಲಿತಾಂಶ ಬರುತ್ತಿದೆ. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸರ್ಕಾರಿ ವಸತಿ ಸೌಲಭ್ಯಗಳೂ ಲಭ್ಯವಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಉಪಾಧ್ಯಕ್ಷ ಎಂ.ಪಿ. ಸುರೇಶ್ ಅವರ ಸಹಕಾರದಿಂದ ಕಾಲೇಜಿನ ಅಭಿವೃದ್ಧಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಉತ್ತಮ ಫಲಿತಾಂಶ ತರುವ ಗುರಿಯೊಂದಿಗೆ ಕಾಲೇಜು ಕಾರ್ಯನಿರ್ವಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ದಾಮೋದರ ಶೆಣೈ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

img 20260509 wa00045860114908554563270 ಹೊಸನಗರ :ಪಿಯುಸಿ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡ ಉಪನ್ಯಾಸಕರು

Leave a Reply

Your email address will not be published. Required fields are marked *