ಕಸಬಾ ವಲಯ ಮಟ್ಟದ ಕ್ರೀಡಾಕೂಟ|ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ: ಬಿ.ಕೆ. ಸುರೇಶ್

Addaheading 20260911 215128 0000 ಕಸಬಾ ವಲಯ ಮಟ್ಟದ ಕ್ರೀಡಾಕೂಟ|ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ: ಬಿ.ಕೆ. ಸುರೇಶ್
Spread the love

ಹೊಸನಗರ: ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆ ಅತ್ಯವಶ್ಯಕವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಕೆ. ಸುರೇಶ್ ಹೇಳಿದರು.

ಹೊಸನಗರ ತಾಲ್ಲೂಕಿನ ಜಯನಗರದಲ್ಲಿ 17 ವರ್ಷದೊಳಗಿನ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಆಯೋಜಿಸಲಾಗಿದ್ದ ಕಸಬಾ ವಲಯ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ನಿಯಮಿತ ವ್ಯಾಯಾಮ ಅತ್ಯಗತ್ಯ. ಚಿಕ್ಕ ವಯಸ್ಸಿನಿಂದಲೇ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೇಹ ಸದೃಢವಾಗುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ಕಸಬಾ ವಲಯದ 15 ಶಾಲೆಗಳ ಸುಮಾರು 450 ವಿದ್ಯಾರ್ಥಿಗಳು ಭಾಗವಹಿಸಿದ್ದರು.
   ಉದ್ಘಾಟನಾ ಸಮಾರಂಭದಲ್ಲಿ ನೌಕರರ ಸಂಘದ ಅಧ್ಯಕ್ಷ ಬಂಡಿ ಸೋಮಶೇಖರ, ಪ್ರೌಢಶಾಲಾ ಮುಖ್ಯ ಶಿಕ್ಷಕ ರೇಣುಕೇಶ್, ಚಂದ್ರಕಾಂತ್, ರಂಗನಾಥ್ ಎಂ., ನಾಗರಾಜ್ ಬಿ.ಎಸ್., ಮುರುಳಿಧರ, ರವೀಂದ್ರನಾಥ್ ಪುಟ್ಟಪ್ಪ, ಶ್ರೀಮತಿ ರೇಣುಕಾ ಗುರುಮೂರ್ತಿ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

file 000000003f5c8208a0b120fec3430d9d3416766304649484498 ಕಸಬಾ ವಲಯ ಮಟ್ಟದ ಕ್ರೀಡಾಕೂಟ|ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅವಶ್ಯಕ: ಬಿ.ಕೆ. ಸುರೇಶ್

Leave a Reply

Your email address will not be published. Required fields are marked *

error: Content is protected !!